Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ತಂಡ; ರೋಹಿತ್-ಕೊಹ್ಲಿಗೆ ವಿಶ್ರಾಂತಿ, ಈ ಆಟಗಾರನಿಗೆ ನಾಯಕತ್ವ!?

ಇಡೀ ಕ್ರಿಕೆಟ್ ಜಗತ್ತು 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಮೇಲೆ ಕೇಂದ್ರೀಕೃತವಾಗಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ಮುಂದಿನ 5 ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ಕಾರ್ಯಮಗ್ನವಾಗಿದೆ.

ದ್ವಿಪಕ್ಷೀಯ ಸರಣಿಯು ಜುಲೈ 6ರಂದು ಪ್ರಾರಂಭವಾಗಲಿದ್ದು, ಭಾರತದ ಮುಂದಿನ ಪೀಳಿಗೆಯ ಕ್ರಿಕೆಟ್ ತಾರೆಯರು ಜಿಂಬಾಬ್ವೆಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಹೀಗಾಗಿ ಅನುಭವಿಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತದೆ.

India s Squad for T20 Series Against Zimbabwe Rest for Rohit-Kohli Captaincy for this player

ಇದೇ ವೇಳೆ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ಸಹ ಭಾರತ ತಂಡದೊಂದಿಗೆ ಜಿಂಬಾಬ್ವೆಗೆ ಪ್ರಯಾಣಿಸುವ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ ವರದಿಯ ಪ್ರಕಾರ, ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯಲ್ಲಿ ಜಿಂಬಾಬ್ವೆ ಸರಣಿಗೆ ಭಾರತ ತಂಡದ ನಾಯಕನಾಗಿ ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

India s Squad for T20 Series Against Zimbabwe Rest for Rohit-Kohli Captaincy for this player

ಭಾರತ ತಂಡವು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ತಾರೆಯರಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ತುಷಾರ್ ದೇಶಪಾಂಡೆ ಮತ್ತು ಹರ್ಷಿತ್ ರಾಣಾ ಅವರನ್ನು ಒಳಗೊಳ್ಳುವ ನಿರೀಕ್ಷೆಯಿದೆ.

2024ರ ಐಸಿಸಿ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದೊಂದಿಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರೂ ಸೇರ್ಪಡೆಯಾಗಲಿದ್ದಾರೆ.

ಶುಭ್ಮನ್ ಗಿಲ್ ಅವರು ಈ ಮೊದಲು ಭಾರತೀಯ ತಂಡದೊಂದಿಗೆ ಯುಎಸ್ಎಗೆ ಟಿ20 ವಿಶ್ವಕಪ್‌ ಮೀಸಲು ತಂಡದ ಸದಸ್ಯರಾಗಿ ಪ್ರಯಾಣಿಸಿದ್ದರು. ಆದರೆ ವೇಗಿ ಅವೇಶ್ ಖಾನ್ ಅವರೊಂದಿಗೆ ವಾಪಸ್ ಕಳುಹಿಸಲಾಯಿತು.

ಜಿಂಬಾಬ್ವೆ ಸರಣಿಗೆ ಭಾರತ ತಂಡದ ಕೋಚ್ ಯಾರು?

ಭಾರತ ತಂಡದ ಹೊಸ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ನೇಮಕಾತಿಯ ರಹಸ್ಯ ಇನ್ನೂ ಕೊನೆಗೊಂಡಿಲ್ಲ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಕೆಲವು ಇತರ ಸಹಾಯಕ ಕೋಚ್‌ಗಳೊಂದಿಗೆ ಟೀಮ್ ಇಂಡಿಯಾ ಜೊತೆ ಜಿಂಬಾಬ್ವೆಗೆ ಪ್ರಯಾಣಿಸುವ ನಿರೀಕ್ಷೆಯಿದೆ.

ಮುಂದಿನ ಭಾರತೀಯ ಕೋಚ್ ಬಹುತೇಕ ಗೌತಮ್ ಗಂಭೀರ್ ಅವರು ಜುಲೈ 27ರಂದು ಪ್ರಾರಂಭವಾಗುವ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ತಂಡವನ್ನು ಸೇರುವ ನಿರೀಕ್ಷೆಯಿದೆ.

ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಭಾವ್ಯ ಭಾರತ ತಂಡ

ಶುಭ್ಮನ್ ಗಿಲ್ (ನಾಯಕ), ರುತುರಾಜ್ ಗಾಯಕ್ವಾಡ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಯಶ್ ದಯಾಳ್, ಖಲೀಲ್ ಅಹ್ಮದ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ರಿಯಾನ್ ಪರಾಗ್, ರಜತ್ ಪಾಟಿದಾರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

Story first published: Monday, June 24, 2024, 14:05 [IST]
Other articles published on Jun 24, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+