Women's T20 World Cup: ಭಾರತ ತಂಡ ಪ್ರಕಟ: ಹರ್ಮನ್‌ಗೆ ಪಟ್ಟ, ಕನ್ನಡತಿ ಶ್ರೇಯಾಂಕಾಗೆ ಸ್ಥಾನ
ಮುಂಬರು ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಮಹಿಳಾ ತಂಡವನ್ನು ಅನುಭವಿ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂದನಾ ತಂಡದ ಉಪನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಟೂರ್ನಿಗೆ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ತಂಡವನ್ನು ಪ್ರಕಟಿಸಿದೆ. ಈ ಮೊದಲು ಮಹಿಳಾ ಟಿ20 ವಿಶ್ವಕಪ್ ಬಾಂಗ್ಲಾದೇಶದಲ್ಲಿ ಆಯೋಜಿಸಬೇಕಿತ್ತು. ಆದರೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಹಿನ್ನೆಲೆ ಟೂರ್ನಿಯನ್ನು ಯುಎಇಗೆ ಶಿಫ್ಟ್ ಮಾಡಲಾಯಿತು.

ಭಾರತ ತಂಡದಲ್ಲಿ ಸ್ಮೃತಿ ಮಂಧಾನ, ಶಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾಗೆ ಅವಕಾಶ ನೀಡಲಾಗಿದೆ. ಇವರಲ್ಲದೆ ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ ಮತ್ತು ಯಾಷ್ಟಿಕಾ ಭಾಟಿಯಾ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್, ಹೇಮಲತಾ, ಶೋಭನಾ, ರಾಧಾ ಯಾದವ್ ಅವರಿಗೂ ಚಾನ್ಸ್ ಸಿಕ್ಕಿದೆ. ಟೂರ್ನಿಯಲ್ಲಿ ಭಾರತದ ಮೊದಲ ಪಂದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಟೀಂ ಇಂಡಿಯಾ ಒಟ್ಟು 4 ಗುಂಪು ಪಂದ್ಯಗಳನ್ನು ಆಡಲಿದೆ.
ಅಕ್ಟೋಬರ್ 6 ರಂದು ಬಿಗ್ ಫೈಟ್
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಅಕ್ಟೋಬರ್ 6 ರಂದು ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದೆ. ಈ ಪಂದ್ಯ ದುಬೈನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಕೊನೆಯ ಗ್ರೂಪ್ ಪಂದ್ಯ ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 13 ರಂದು ಶಾರ್ಜಾದಲ್ಲಿ ನಡೆಯಲಿದೆ.
ಕನ್ನಡತಿ ಶ್ರೇಯಾಂಕಾಗೆ ಅವಕಾಶ
ಟಿ20 ವಿಶ್ವಕಪ್‌ಗೆ ಪ್ರಕಟಿತ ಭಾರತ ತಂಡದಲ್ಲಿ ಕರ್ನಾಟಕದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಆಯ್ಕೆ ಆಗಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದ್ದ ಶ್ರೇಯಾಂಕಾ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸ್ಥಿರ ಪ್ರದರ್ಶನ ನಿಡುತ್ತಿದ್ದಾರೆ. ಇವರು ಬ್ಯಾಟಿಂಗ್ ಹಾಗೂ ಬೌಲಿಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು.
ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭನಾ , ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜ್ನಾ ಸಜೀವನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications