Asia Cup T20: ಪ್ರಯೋಗ ಮಾಡಿದ ಭಾರತಕ್ಕೆ ನೀರಸ ಗೆಲುವು: ಸೂರ್ಯ ಪಡೆಗೆ ಹ್ಯಾಟ್ರಿಕ್ ಜಯ
ಅಬುದಾಬಿ: ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರಯೋಗ ನಡೆಸಿ ನೀರಸ ಗೆಲುವು ದಾಖಲಿಸಿದೆ. ವಿಶ್ವದ ನಂಬರ್ 1 ತಂಡದ ವಿರುದ್ಧ, ವಿಶ್ವದ 20ನೇ ಶ್ರೇಯಾಂಕಿತ ತಂಡ ಕೆಚ್ಚೆದೆಯ ಹೋರಾಟ ನಡೆಸಿತು. ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಜಯ ಸಾಧಿಸಿದರೂ ಅಂದುಕೊಂಡಷ್ಟು ದೊಡ್ಡ ಗೆಲುವು ದಾಖಲಿಸಲಿಲ್ಲ. ಟೀಮ್ ಇಂಡಿಯಾ ಈ ಪಂದ್ಯವನ್ನು 21 ರನ್ ಗಳ ಜಯ ದಾಖಲಿಸಿತು.
ಓಮನ್ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ (5) ನಿರಾಸೆ ಅನುಭವಿಸಿದರು. ಎರಡನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ರನ್ ವೇಗಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು ಮಾಡಿತು. ಈ ಜೋಡಿ 34 ಎಸೆತಗಳಲ್ಲಿ 66 ರನ್ ಬಾರಿಸಿದ್ದಾಗ ಅಭಿಷೇಕ್ ಶರ್ಮಾ ಔಟ್ ಆದರು. ಇವರು 5 ಬೌಂಡರಿ, 2 ಸಿಕ್ಸರ್ ಒಳಗೊಂಡಂತೆ 38 ರನ್ ಬಾರಿಸಿ ಔಟ್ ಆದರು.

ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ಹಾರ್ದಿಕ್ ಪಾಂಡ್ಯ (1) ರನ್ ಕಲೆ ಹಾಕುವಲ್ಲಿ ವಿಫಲರಾದರು. ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಆಲ್‌ರೌಂಡರ್ ಅಕ್ಷರ್ ಪಟೇಲ್ (26), ಸಂಜು ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 45 ರನ್ ಸೇರಿಸಿದರು. ಶಿವಂ ದುಬೆ ಬಂದು ಹೋಗುವ ಸಂಪ್ರದಾಯ ಮುಗಿಸಿದರು.
6ನೇ ವಿಕೆಟ್‌ಗೆ ಭರವಸೆಯ ಬ್ಯಾಟರ್‌ಗಳಾದ ಸಂಜು ಹಾಗೂ ತಿಲಕ್ ವರ್ಮಾ ಸ್ಥಿರ ಪ್ರದರ್ಶನ ನೀಡಿತು. ಸಂಜು ಸ್ಯಾಮ್ಸನ್ ತಮ್ಮ ವೃತ್ತಿ ಜೀವನದಲ್ಲಿ ಮತ್ತೊಂದು ಅರ್ಧಶತಕ ಬಾರಿಸಿದರು. ಇವರು 3 ಬೌಂಡರಿ, 3 ಸಿಕ್ಸರ್ ನೆರವಿನಿಂದ 56 ರನ್ ಬಾರಿಸಿದ್ದಾಗ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು. ತಿಲಕ್ ವರ್ಮಾ 29, ಹರ್ಷಿತ್ ರಾಣಾ ಅಜೇಯ 13 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 188 ರನ್ ಸೇರಿಸಿತು. ಇದು ಈ ಟೂರ್ನಿಯಲ್ಲಿ ದಾಖಲಾದ ಜಂಟಿ ಗರಿಷ್ಠ ಮೊತ್ತವಾಗಿದೆ.
ಭರ್ಜರಿ ಪ್ರದರ್ಶನ ನೀಡಿದ ಓಮನ್
ಟೀಮ್ ಇಂಡಿಯಾ ನೀಡಿದ್ದ ಸವಾಲಿನ ಗುರಿಯನ್ನು ಮೆಟ್ಟಿ ನಿಲ್ಲುವ ವಿಶ್ವಾಸವನ್ನು ಆರಂಭದಲ್ಲಿ ಓಮನ್ ಬ್ಯಾಟರ್‌ಗಳು ತೋರಿಸಿದರು. ಆರಂಭಿಕರಾದ ಜೀತೆಂದ್ರ ಸಿಂಗ್ (32) ಹಾಗೂ ಅಮೀರ್ ಖಲೀಮ್ ಜೋಡಿ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲಿ 56 ರನ್‌ಗಳ ಜೊತೆಯಾಟವನ್ನು ನೀಡಿತು. ಎರಡನೇ ವಿಕೆಟ್‌ಗೆ ಅಮೀರ್ ಹಾಗೂ ಹಮೀದ್ ಮಿರ್ಜಾ ಜೋಡಿ ಟೀಮ್ ಇಂಡಿಯಾ ಬೌಲರ್‌ಗಳನ್ನು ಕಾಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಸೂರ್ಯಕುಮಾರ್ ಪಡೆ ವಿಫಲವಾಯಿತು. ಈ ಜೋಡಿ ಎರಡನೇ ವಿಕೆಟ್‌ಗೆ 55 ಎಸೆತಗಳಲ್ಲಿ 93 ರನ್ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಅಮೀರ್ ಖಲೀಮ್ 7 ಬೌಂಡರಿ, 2 ಸಿಕ್ಸರ್ ಸಹಾಯದಿಂದ 64 ರನ್ ಬಾರಿಸಿ ಮಿಂಚಿದರು.

ಮಧ್ಯಮ ಕ್ರಮಾಂಕದಲ್ಲಿ ಹಮೀದ್ ಮಿರ್ಜಾ ಅವರು 5 ಬೌಂಡರಿ, 2 ಸಿಕ್ಸರ್ ಸಹಾಯದಿಂದ 51 ರನ್ ಸಿಡಿಸಿದರು. ಉಳಿದ ಬ್ಯಾಟರ್‌ಗಳು ಟೀಮ್ ಇಂಡಿಯಾದ ಬಿಗುವಿನ ದಾಳಿಯನ್ನು ಎದುರಿಸುವಲ್ಲಿ ವಿಫಲವಾಯಿತು. ಅಂತಿಮವಾಗಿ ಓಮನ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 167 ರನ್ ಕಲೆ ಹಾಕಿ ಸೋಲು ಕಂಡಿತು.
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ಹರ್ಷಿತ್ ರಾಣಾ, ಕುಲ್‌ದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications