Asia Cup T20: ಟಿ20 ವಿಶ್ವಕಪ್ ಬಳಿಕ ಎಷ್ಟು ಬದಲಾಗಿದೆ ಟೀಮ್ ಇಂಡಿಯಾ
ಬಿಸಿಸಿಐ ಅಗಸ್ಟ್ 19 ರಂದು ಏಷ್ಯಾ ಕಪ್ ಟಿ20 ಕ್ರಿಕೆಟ್ ಭಾರತ ತಂಡವನ್ನು ಪ್ರಕಟಿಸಲಾಗಿದ. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಮಂಗಳವಾರ 15 ಜನರ ತಂಡವನ್ನು ಪ್ರಕಟಿಸಿದರು. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಭಾರತ ಟಿ20 ಫರ್ಮೆಟ್‌ನಲ್ಲಿ ಅತಿ ದೊಡ್ಡ ಟೂರ್ನಿ ಟಿ2ಒ ವಿಶ್ವಕಪ್ ಆಡಿತ್ತು. ಅದಾದ ಬಳಿಕ ಏಷ್ಯಾ ಕಪ್ ಟಿ20 ಫಾರ್ಮೆಟ್‌ಗೆ ಸಿದ್ಧವಾಗುತ್ತದೆ. ಟಿ20 ವಿಶ್ವಕಪ್‌ನ್ನು ರೋಹಿತ್ ಶರ್ಮಾ ನೇತೃತ್ವದ ತಂಡ ಗೆದ್ದು ಇತಿಹಾಸ ನಿರ್ಮಿಸಿತ್ತು. ಹಾಗಿದ್ದಾರೆ ಆ ತಂಡಕ್ಕೂ ಈಗಿನ ತಂಡಕ್ಕು ಎಷ್ಟು ವ್ಯತ್ಯಾಸಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಟಿ20 ವಿಶ್ವಕಪ್ ಹಾಗೂ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಗೆ ಪ್ರಕಟವಾಗಿರುವ ತಂಡದಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ಆರಂಭದಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆ ಆಗಿದ್ದರು. ಅಲ್ಲದೆ ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಆಯ್ಕೆ ಆಗಿದ್ದರು. ಆದರೆ ಈ ಬಾರಿ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಉಪನಾಯಕರಾಗಿ ಆಯ್ಕೆ ಆಗಿದ್ದಾರೆ.

ಟಿ20 ಫಾರ್ಮೆಟ್‌ಗೆ ವಿಶ್ವಕಪ್ ಬಳಿಕ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ನಿವೃತ್ತಿ ಘೋಷಿಸಿದ್ದರು. ಇವರನ್ನು ಬಿಟ್ಟರೆ, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಯುಜುವೇಂದ್ರ ಚಹಾಲ್ ಮೊಹಮ್ಮದ್ ಸಿರಾಜ್ ಅವರಿಗೆ ಸ್ಥಾನವನ್ನು ಟಿ20 ವಿಶ್ವಕಪ್‌ನಲ್ಲಿ ನೀಡಲಾಗಿತ್ತು. ಪಂತ್ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದರೆ, ಚಹಾಲ್, ಸಿರಾಜ್ ಅವರನ್ನು ತಂಡದಿಂದ ಕೈ ಬಿಡಲಾದ ಕಾರಣ ಬಹಿರಂಗವಾಗಿಲ್ಲ.
8 ಆಟಗಾರರಿಗೆ ಮಾತ್ರ ಅವಕಾಶ
ಟಿ20 ವಿಶ್ವಕಪ್‌ನಲ್ಲಿ ಆಡಿದ 8 ಆಟಗಾರರಿಗೆ ಏಷ್ಯಾ ಕಪ್ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಇವರಲ್ಲದೆ 7 ಯುವ ಆಟಗಾರರಿಗೆ ತಂಡದಲ್ಲಿ ತಮ್ಮ ಸ್ಥಾನ ಪಡೆದಿದ್ದಾರೆ.
ಏಷ್ಯಾ ಕಪ್ ಟಿ20ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವರುಣ್ ಚಕ್ರವರ್ತಿ
ಟಿ20 ವಿಶ್ವಕಪ್‌ಗೆ ಪ್ರಕಟ ಗೊಂಡಿದ್ದ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ಬಿ. ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications