For Quick Alerts
ALLOW NOTIFICATIONS  
For Daily Alerts
 

Rohit Sharma: ಅಜರುದ್ಧಿನ್ ದಾಖಲೆ ಮುರಿಯುತ್ತಾರಾ ರೋಹಿತ್ ಶರ್ಮಾ?

ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲೂ ರನ್‌ ಗಳನ್ನು ಕಲೆ ಹಾಕಿ ಅಬ್ಬರಿಸಿದ್ದರು. ಅಲ್ಲದೆ ಏಕದಿನ ಸರಣಿಯಲ್ಲಿ ಭಾರತದ ಪರ ಗರಿಷ್ಠ ರನ್‌ ಸಾಧನೆ ಮಾಡಿದ ಹಿರಿಮೆ ಹೊಂದಿದ್ದಾರೆ. ಈಗ ಬಾಂಗ್ಲಾದೇಶದ ವಿರುದ್ಧ ಸರಣಿಯನ್ನು ರೋಹಿತ್ ಶರ್ಮಾ ಎದುರು ನೋಡುತ್ತಿದ್ದಾರೆ.

ರೋಹಿತ್‌ ಶರ್ಮಾ 2024 ಟಿ20 ವಿಶ್ವಕಪ್‌ ಫೈನಲ್‌ ಬಳಿಕ ಚುಟುಕು ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈಗ ಅವರು ಬರೀ ಏಕದಿನ ಹಾಗೂ ಟೆಸ್ಟ್‌ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಆಡಲಿದ್ದಾರೆ. ಶ್ರೀಲಂಕಾ ಪ್ರವಾಸದ ಬಳಿಕ ರೋಹಿತ್ ರೆಸ್ಟ್‌ನಲ್ಲಿದ್ದಾರೆ. ಬಾಂಗ್ಲಾದೇಶ ತಂಡ ಸೆಪ್ಟೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಅವಧಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳು ರೋಹಿತ್ ಶರ್ಮಾ ಅವರಿಗೆ ಮಹತ್ವದಾಗಿದೆ.

India s Top Test-Winning Captains Rohit Kohli Ganguly Azharuddin

ಟೆಸ್ಟ್‌ನಲ್ಲಿ ಹೇಗಿದೆ ರೋಹಿತ್‌ ಶರ್ಮಾ ಅಂಕಿ ಅಂಶ

ಟೆಸ್ಟ್‌ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮಾ ಅಬ್ಬರ ಜೋರಾಗಿ ಇರದೇ ಇರಬಹುದು. ಆದರೆ, ನಾಯಕತ್ವದ ಗುಣಗಳಿಂದ ಎಲ್ಲರ ಮನ ಗೆದ್ದಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮಾ ಅವರ ದಾಖಲೆ ಹೇಗಿದೆ ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ಅದಕ್ಕೆ ಉತ್ತರ ಇಲ್ಲಿದೆ.

ರೋಹಿತ್‌ ಶರ್ಮಾ ಭಾರತದ ಉತ್ತಮ ನಾಯಕ. ಇವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಮೋಘ ಸಾಧನೆ ಮಾಡಿದೆ. ರೋಹಿತ್ ಶರ್ಮಾ ರೆಡ್‌ ಬೌಲ್‌ ಕ್ರಿಕೆಟ್‌ನಲ್ಲೂ ಇದೇ ಪ್ರದರ್ಶನ ಮುಂದುವರೆಸಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಭಾರತದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕ ಎಂಬ ಶ್ರೇಯ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಸಲ್ಲುತ್ತದೆ. ಇವರ ನಾಯಕತ್ವದಲ್ಲಿ ಭಾರತ 40 ಟೆಸ್ಟ್‌ ಪಂದ್ಯ ಗೆದ್ದಿದೆ.

ಅತಿ ಹೆಚ್ಚು ಟೆಸ್ಟ್‌ ಪಂದ್ಯ ಗೆದ್ದ ಭಾರತದ ನಾಯಕ ಯಾರು?

ನಾಯಕನಾಗಿ ರೋಹಿತ್‌ ಶರ್ಮಾ 16 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, ಇದರಲ್ಲಿ 10 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದಾರೆ. ರೋಹಿತ್ ಶರ್ಮಾ ನಾಯಕನಾಗಿ ಟೆಸ್ಟ್‌ನಲ್ಲಿ 4 ಪಂದ್ಯಗಳನ್ನು ಸೋತಿದ್ದಾರೆ ಮತ್ತು ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ರೋಹಿತ್ ಶರ್ಮಾ ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಇದೆ.

ಅಜರುದ್ದೀನ್ ಅವರು 47 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದು, ಈ ವೇಳೆ 14 ಪಂದ್ಯಗಳನ್ನು ಗೆದ್ದಿದ್ದಾರೆ. ಉಳಿದಂತೆ 14 ಪಂದ್ಯಗಳಲ್ಲಿ ತಂಡ ಸೋಲು ಕಂಡಿದ್ದು, 19 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

India s Top Test-Winning Captains Rohit Kohli Ganguly Azharuddin

ಭಾರತದ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ನಾಯಕ ಎಂಬ ಕೀರ್ತಿ ವಿರಾಟ್‌ ಅವರಿಗೆ ಸಲ್ಲುತ್ತದೆ. ಇವರ ಬಳಿಕ ಎಂಎಸ್‌ ಧೋನಿ ಕಾಣಿಸಿಕೊಳ್ಳುತ್ತಾರೆ. ಇವರು ಭಾರತ ತಂಡವನ್ನು 60 ಪಂದ್ಯಗಳಲ್ಲಿ ಮುನ್ನಡೆಸಿದ್ದು, 27ರಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಸೌರವ್‌ ಗಂಗೂಲಿ ಭಾರತದ ಪರ 47 ಪಂದ್ಯಗಳಲ್ಲಿ ನಾಯಕತ್ವವನ್ನು ಮಾಡಿದ್ದು, ಇದರಲ್ಲಿ 21 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಪಟ್ಟಿಯಲ್ಲಿ ಅಜರ್‌ ಹೆಸರು ನಾಲ್ಕನೇ ಸ್ಥಾನದಲ್ಲಿದೆ.

10 ಟೆಸ್ಟ್‌ ಪಂದ್ಯಗಳು

ರೋಹಿತ್ ಶರ್ಮಾ ಅವರಿಗೆ ಅಜರುದ್ಧಿನ್‌ ಅವರ ದಾಖಲೆಯನ್ನು ಅಳಿಸಿ ಹಾಕಲು ಸುವರ್ಣ ಅವಕಾಶ ಒದಗಿ ಬಂದಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಡಿಯಲ್ಲಿ ಭಾರತ ಮುಂದಿನ ಕೆಲವು ತಿಂಗಳಲ್ಲಿ ಒಟ್ಟು 10 ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಈ ವೇಳೆ ಭಾರತ ಐದು ಪಂದ್ಯಗಳಲ್ಲಿ ಜಯ ದಾಖಲಿಸಿದರೂ, ಫೈನಲ್‌ ಪ್ರವೇಶಿಸುವ ಕನಸು ಕಾಣಬಹುದು. ರೋಹಿತ್‌ ಐದು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಅಜರುದ್ಧಿನ್‌ ದಾಖಲೆಯನ್ನು ಅಳಿಸಿ ಹಾಕಬಹುದು.

ಭಾರತ ತಂಡ ಸೆಪ್ಟಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಎರಡು ಟೆಸ್ಟ್ ಸರಣಿ ಆಡಲಿದೆ. ಇದಾದ ಬಳಿಕ ನ್ಯೂಜಿಲೆಂಡ್‌ ವಿರುದ್ಧ ಮೂರು ಹಾಗೂ ಆಸ್ಟ್ರೇಲಿಯಾ ಪ್ರವಾಸದಲ್ಲಿ ಐದು ಟೆಸ್ಟ್‌ ಪಂದ್ಯಗಳನ್ನು ಆಡಲಿದೆ.

Story first published: Tuesday, August 20, 2024, 15:18 [IST]
Other articles published on Aug 20, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+