Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy 2025: ದುಬೈನಲ್ಲಿ ಹೇಗಿದೆ ಭಾರತದ ಅಂಕಿ ಅಂಶ? ಇಲ್ಲಿದೆ ಮಾಹಿತಿ

ಇನ್ನೇನು ಕೆಲವೇ ದಿನಗಳಲ್ಲಿ ಚಾಂಪಿಯನ್ಸ್‌ ಟ್ರೋಫಿ ಆರಂಭವಾಗಲಿದೆ. ಈ ವೇಳೆ ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾದರೆ, ಭಾರತ ಫೆ.20 ರಂದು ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಇನ್ನು ವಿಶ್ವವೇ ಬಹು ನಿರೀಕ್ಷೆಯಿಂದ ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯ ಫೆ.23 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪಂದ್ಯ ಗೆಲ್ಲುವ ಹಾಟ್ ಫೆವರೀಟ್ ತಂಡ.

ದುಬೈನಲ್ಲಿ ಟೀಮ್ ಇಂಡಿಯಾ ತನ್ನ ಲೀಗ್ ಹಂತದ ಹಾಗೂ ನಾಕೌಟ್‌ ಹಂತಕ್ಕೆ ಪ್ರವೇಶಿಸಿದರೆ ಆ ಪಂದ್ಯಗಳನ್ನು ಅಲ್ಲಿಯೇ ಆಡಲಿದೆ. ಅಲ್ಲದೆ ಟೀಮ್ ಇಂಡಿಯಾ ಫೈನಲ್‌ ಪ್ರವೇಶಿಸಿದರೂ ಇದೇ ಅಂಗಳದಲ್ಲಿ ಕಾದಾಟ ನಡೆಯಲಿದೆ. ಇನ್ನು ದುಬೈನಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗೆದೆ ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ಅದಕ್ಕೆ ಉತ್ತರ ಇಲ್ಲಿದೆ.

India s Unbeaten Record in Dubai Boosts Confidence Ahead of Champions Trophy Clash Against Pakistan

ದುಬೈನಲ್ಲಿ ಹೇಗೆದೆ ಸಾಧನೆ?

ದುಬೈನಲ್ಲಿ ಭಾರತದ ದಾಖಲೆ ಅಮೋಘವಾಗಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಈ ಅಂಗಳದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಟೀಮ್ ಇಂಡಿಯಾ ಒಟ್ಟು 5 ಏಕದಿನ ಪಂದ್ಯಗಳನ್ನು ಆಡಿದ್ದು ಇದರಲ್ಲಿ ಐದು ಪಂದ್ಯಗಳನ್ನು ಗೆದ್ದಿದೆ. ಈ ವೇಳೆ ಒಂದು ಪಂದ್ಯ ಟೈನಲ್ಲಿ ಅಂತ್ಯವಾಗಿದೆ. ವಿಶೇಷವೆಂದರೆ ಭಾರತ ತಂಡವು ಈ ಮೈದಾನದಲ್ಲಿ ಪಾಕಿಸ್ತಾನ ವಿರುದ್ಧ ಎರಡು ಏಕದಿನ ಪಂದ್ಯಗಳನ್ನು ಆಡಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ಒಟ್ಟು 135 ಏಕದಿನ ಪಂದ್ಯಗಳನ್ನುಆಡಲಾಗಿದೆ. ಈ ವೇಳೆ ಪಾಕಿಸ್ತಾನ 73 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 57 ಪಂದ್ಯಗಳನ್ನು ಗೆದ್ದಿದೆ. ಆದರೆ, ಐಸಿಸಿ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನವನ್ನು ನೀಡಿದೆ. ಹೀಗಾಗಿ ಫೆಬ್ರವರಿ 23 ರಂದು ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲುವ ಚಾನ್ಸ್‌ ಹೆಚ್ಚಿದೆ. ಅಲ್ಲದೆ ಪಾಕಿಸ್ತಾನ ತಂಡಕ್ಕೆ ಹೋಲಿಸಿದರೆ, ಟೀಮ್ ಇಂಡಿಯಾ ಬಲಾಡ್ಯವಾಗಿದೆ. ಹೀಗಾಗಿ ಗೆಲುವಿನ ಕನಸು ಚಿಗುರಿದೆ. ಉಭಯ ತಂಡಗಳು ಕೊನೆಯ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ ಆಗಿದ್ದವು. ಹೀಗಾಗಿ ಈ ಎರಡೂ ತಂಡಗಳ ನಡುವಣ ಹೈ ವೋಲ್ಟೇಜ್ ಪಂದ್ಯವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ.

India s Unbeaten Record in Dubai Boosts Confidence Ahead of Champions Trophy Clash Against Pakistan

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ ಮತ್ತು ವರುಣ್ ಚಕ್ರವರ್ತಿ.

Story first published: Saturday, February 15, 2025, 21:35 [IST]
Other articles published on Feb 15, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+