ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹೆಡಿಂಗ್ಲೆ ಟೆಸ್ಟ್: ಸರಣಿಯ ಅತ್ಯುತ್ತಮ ಕ್ಯಾಚ್ ಹಿಡಿದ ಜಾನಿ ಬೈರ್‌ಸ್ಟೋವ್: ವಿಡಿಯೋ

Indis vs England: Jonny Bairstow takes a spectacular catch to dismiss KL Rahul

ಲೀಡ್ಸ್, ಆಗಸ್ಟ್ 27: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಆಡಿದ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಈಗಾಗಲೇ ಭಾರೀ ಬೆಲೆ ತೆತ್ತಿರುವ ಟೀಮ್ ಇಂಡಿಯಾ ಭಾರೀ ಹಿನ್ನೆಡೆಯನ್ನು ಅನುಭವಿಸಿದೆ. ಈ ಹಿನ್ನೆಡೆಯನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಸರಿದೂಗಿಸುವ ಪ್ರಯತ್ನವಾಗುತ್ತಿದೆ. ಟೀಮ್ ಇಂಡಿಯಾ ಪರವಾಗಿ ರೋಹಿತ್ ಶರ್ಮಾ ಹಾಗೂ ಚೇತೇಶ್ವರ್ ಪೂಜಾರ ಅದ್ಭುತ ಆಟವನ್ನು ಪ್ರದರ್ಶಿಸಿದ್ದಾರೆ. ಆದರೆ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶೀಘ್ರವಾಗಿ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಮೂಡಿಸಿದ್ದಾರೆ.

ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸಲು ಕಣಕ್ಕಿಳಿದ ಕೆಎಲ್ ರಾಹುಲ್ 8 ರನ್‌ಗಳನ್ನು ಗಳಿಸಿ ಆಡುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಹಿಡಿದ ಅದ್ಭುತ ಕ್ಯಾಚ್‌ಗೆ ರಾಹುಲ್ ವಿಕೆಟ್ ಕಳೆದುಕೊಳ್ಳಬೇಕಾಯಿತು. ಈ ಮೂಲಕ ರಾಹುಲ್ ಆಟ ಕೇವಲ 8 ರನ್‌ಗೆ ಅಂತ್ಯವಾಯಿತು. ಇದಕ್ಕಾಗಿ 54 ಎಸೆತಗಳನ್ನು ಎದುರಿಸಿದ್ದಾರೆ.

ಐಪಿಎಲ್‌ನಲ್ಲಿ ಆಡಲು ಸಜ್ಜಾಗಿದ್ದಾರೆ ಐಸಿಸಿ ಟಿ20ಐ ಟಾಪ್ 4 ಶ್ರೇಯಾಂಕಿತ ಬೌಲರ್ಸ್!ಐಪಿಎಲ್‌ನಲ್ಲಿ ಆಡಲು ಸಜ್ಜಾಗಿದ್ದಾರೆ ಐಸಿಸಿ ಟಿ20ಐ ಟಾಪ್ 4 ಶ್ರೇಯಾಂಕಿತ ಬೌಲರ್ಸ್!

ಮೊದಲ ಇನ್ನಿಂಗ್ಸ್‌ನಲ್ಲಿ ನೀಡಿದ ನಿರಾಶಾದಾಯಕ ಪ್ರದರ್ಶನದ ಬಳಿಕ ಟೀಮ್ ಇಂಡಿಯಾ ಅಭಿಮಾನಿಗಳು ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆಯುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಇಂಗ್ಲೆಂಡ್ ತಂಡದ ಅದ್ಭುತ ವೇಗದ ಬೌಲಿಂಗ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವ ನಿರೀಕ್ಷೆಯಿತ್ತು. ಇದಕ್ಕೆ ಪೂರಕವಾಗಿ ಭಾರತೀಯ ಬ್ಯಾಟ್ಸ್‌ಮನ್‌ಗಳು ರಕ್ಷಣಾತ್ಮಕವಾಗಿ ಆಡುತ್ತಾ ಹೊಸ ಚೆಂಡಿನ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಾ ಸಾಗಿದ್ದರು. ಆದರೆ ಭೋಜನ ವಿರಾಮಕ್ಕೂ ಮುನ್ನ ಅಂತಿಮ ಓವರ್‌ನಲ್ಲಿ ಕೆಎಲ್ ರಾಹುಲ್ ಜಾನಿ ಬೈರ್‌ಸ್ಟೋವ್‌ಗೆ ಕ್ಯಾಚ್ ನೀಡುವ ಮೂಲಕ ವಿಕೆಟ್ ಕಳೆದುಕೊಂಡಿದ್ದಾರೆ.

ಕ್ರೇಗ್ ಓವರ್ಟನ್ ಎಸೆದ ಈ ಓವರ್‌ನ ಅಂತಿಮ ಎಸೆತವನ್ನು ರಕ್ಷಣಾತ್ಮಕವಾಗಿ ಆಡಲು ಹೋದ ಕೆಎಲ್ ರಾಹುಲ್ ಎಡವಿದ್ದರು. ಬ್ಯಾಡ್‌ನ ಬದಿಗೆ ಸವರಿದ ಚೆಂಡು ಸ್ಲಿಪ್‌ನತ್ತ ಜಿಗಿದಿತ್ತು. ಈ ಸಂದರ್ಭದಲ್ಲಿ ಎರಡನೇ ಸ್ಲಿಪ್‌ನಲ್ಲಿ ಕಾಯುತ್ತಿದ್ದ ಜಾನಿ ಬೈರ್‌ಸ್ಟೋವ್ ಅದ್ಭುತವಾಗಿ ಚೆಂಡನ್ನು ಹಾರಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಕೆಎಲ್ ರಾಹುಲ್ ವಿಕೆಟ್ ಪಡೆಯುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿತ್ತು.

ಜಾನಿ ಬೈರ್‌ಸ್ಟೋವ್ ಹಿಡಿದ ಕ್ಯಾಚ್‌ನ ವಿಡಿಯೋ ಇಲ್ಲಿದೆ:

ಎರಡನೇ ವಿಕೆಟ್‌ಗೆ ಅದ್ಭುತ ಜೊತೆಯಾಟ: ಇನ್ನು ಕೆಎಲ್ ರಾಹುಲ್ ಅಗ್ಗಕ್ಕೆ ವಿಕೆಟ್ ಕಳೆದುಕೊಂಡ ನಂತರ ಟೀಮ್ ಇಂಡಿಯಾ ಪಾಲಿಗೆ ಮತ್ತೆ ಆತಂಕ ಶುರುವಾಗಿತ್ತು. ಈ ಸಂದರ್ಭದಲ್ಲಿ ಆರಂಭಿಕ ಆಟಗಾರ ರೋಹಿತ್ ಶರ್ಮಾಗೆ ಚೇತೇಶ್ವರ್ ಪೂಜಾರ ಜೊತೆಯಾದರು. ಈ ಜೋಡಿ ಎರಡನೇ ವಿಕೆಟ್‌ಗೆ ಉತ್ತಮ ಜೊತೆಯಾಟ ನೀಡುವಲ್ಲಿ ಯಶಸ್ವಿಯಾಗಿತ್ತು. ಎರಡನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ತಂಡಕ್ಕೆ ದೊರೆಯಿತು. 156 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 59 ರನ್‌ಗಳಿಸಿದರು. ಆದರೆ ಟೀ ವಿರಾಮದ ಬಳಿಕ ರೋಹಿತ್ ಶರ್ಮಾ ತಮ್ಮ ವಿಕೆಟ್ ಕಳೆದುಕೊಳ್ಳುವ ಮೂಲಕ ನಿರಾಸೆ ಮೂಡಿಸಿದರು.

ವಿರಾಟ್- ಪೂಜಾರ ಜೊತೆಯಾಟ: ಇನ್ನು ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡ ನಂತರ ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಸುತ್ತಿದ್ದಾರೆ. ಈ ಜೋಡಿ ಕೂಡ ಅರ್ಧಶತಕದ ಜೊತೆಯಾಟವನ್ನು ದಾಟಿ ಮುನ್ನುಗ್ಗುತ್ತಿದೆ. ಚೇತೇಶ್ವರ್ ಪೂಜಾರ ಈ ಸರಣಿಯಲ್ಲಿ ಮೊದಲ ಬಾರಿಗೆ ಅರ್ಧ ಶತಕದ ಗಡಿ ದಾಟಿ ಮುನ್ನುಗ್ಗಿದ್ದಾರೆ. ಮತ್ತೊಂದೆಡೆ ಸರಣಿಯಲ್ಲಿ ಸತತವಾಗಿ ವಿಫಲವಾಗಿರುವ ನಾಯಕ ವಿರಾಟ್ ಕೊಹ್ಲಿ ಕೂಡ ಉತ್ತಮ ಪ್ರದರ್ಶನ ನೀಡುವ ಭರವಸೆ ಮೂಡಿಸಿದ್ದಾರೆ.

ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್: ತಾನು ಮಾಡಿದ ತಪ್ಪಿನ ಕುರಿತು ಮಾತನಾಡಿದ ರಿಷಭ್ ಪಂತ್

ಶೀಘ್ರವಾಗಿ ಇನ್ನಿಂಗ್ಸ್ ಮುಗಿಸಿದ್ದ ಇಂಗ್ಲೆಂಡ್: 8 ವಿಕೆಟ್ ಕಳೆದುಕೊಂಡು ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿದ್ದ ಇಂಗ್ಲೆಂಡ್ ಇಂದು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 432 ರನ್‌ಗಳಿಸಿ ಆಲೌಟ್ ಆಯಿರು. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ 354 ರನ್‌ಗಳ ಭರ್ಜರಿ ಮುನ್ನಡೆ ಸಾಧಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಯಿತು. ಎರಡನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 423 ರನ್‌ಗಳನ್ನು ಗಳಿಸಿ ಎಂಟು ವಿಕೆಟ್ ಕಳೆದುಕೊಂಡಿತ್ತು. ಈ ಮೊತ್ತಕ್ಕೆ 9 ರನ್‌ಗಳನ್ನು ಸೇರಿಸಿದ ಇಂಗ್ಲೆಂಡ್ ಮೂರನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ಅಂತ್ಯಗೊಳಿಸಿತು.

ಭಾರತ ಹಾಗೂ ಇಂಗ್ಲೆಂಡ್ ಆಡುವ ಬಳಗ
ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ,

ಇಂಗ್ಲೆಂಡ್ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಕ್ರೇಗ್ ಓವರ್‌ಟನ್, ಜೇಮ್ಸ್ ಆಂಡರ್ಸನ್, ಒಲ್ಲಿ ರಾಬಿನ್ಸನ್

Story first published: Saturday, August 28, 2021, 9:55 [IST]
Other articles published on Aug 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X