ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮಯಾಂಕ್ ಯಾದವ್, ರಿಯಾನ್ ಪರಾಗ್‌ಗೆ ಏಕೆ ಸ್ಥಾನವಿಲ್ಲ: ಬಿಸಿಸಿಐ ಹೇಳಿದ್ದೇನು?
ಭಾರತ ತಂಡ ಸದ್ಯ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಬೇಕಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪ್ರಕಟಿತ ತಂಡದಲ್ಲಿ ಇಬ್ಬರು ಯುವ ಆಟಗಾರರಿಗೆ ಅವಕಾಶ ಸಿಕ್ಕಿಲ್ಲ. ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಪಂದ್ಯದಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಅವರಿಗೆ ಅವಕಾಶ ಸಿಕ್ಕಿದೆ. ಇದೇ ಮೊದಲ ಬಾರಿಗೆ ಕನ್ನಡಿಗ ವಿಜಯಕುಮಾರ್ ವೈಶಾಖ್ ಸಹ ಬ್ಲ್ಯೂ ಜೆರ್ಸಿ ತೊಡಲು ತಯಾರಾಗಿದ್ದಾರೆ. ಆದರೆ ಆ ಇಬ್ಬರು ಆಟಗಾರರು ತಂಡದಲ್ಲಿ ಇಲ್ಲದೆ ಇರುವುದು ಚರ್ಚೆಗೆ ಗ್ರಾಸವಾಗಿದೆ.

ಯುವ ಆಟಗಾರರು ಮಿಸ್
ಮಯಾಂಕ್ ಯಾದವ್ ಮತ್ತು ಆಲ್‌ರೌಂಡರ್‌ಗಳಾದ ರಿಯಾನ್ ಪರಾಗ್, ಶಿವಂ ದುಬೆ ಅವರನ್ನು ಏಕೆ ಈ ಸರಣಿಗೆ ತಂಡದಲ್ಲಿ ಆಯ್ಕೆ ಮಾಡಲಿಲ್ಲ ಎಂಬ ಮಾಹಿತಿಯನ್ನು ಬಿಸಿಸಿಐ ನೀಡಿದೆ. ಮಯಾಂಕ್ ಯಾದವ್ ಮತ್ತು ಶಿವಂ ದುಬೆ ಈ ಇಬ್ಬರೂ ಆಟಗಾರರು ಗಾಯದಿಂದ ಬಳಲುತ್ತಿರುವ ಕಾರಣ ಆಯ್ಕೆಗೆ ಲಭ್ಯರಿಲ್ಲ. ರಿಯಾನ್ ಪರಾಗ್ ಬಲ ಭುಜದ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ಮಾಹಿತಿ ಹಂಚಿಕೊಂಡಿದೆ. ಬಾಂಗ್ಲಾದೇಶದ ವಿರುದ್ಧ ಟಿ20 ಸರಣಿಯಲ್ಲಿ ಮಯಾಂಕ್ ಯಾದವ್ ಮತ್ತು ರಿಯಾನ್ ಪರಾಗ್ ಆಡಿ ಮಿಂಚಿದ್ದರು.
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯ ವೇಳೆ ಭಾರತ ತಂಡದ ಭಾಗವಾಗಿದ್ದ ಎಡಗೈ ವೇಗದ ಬೌಲರ್ ಯಶ್ ದಾಯಾಳ್ ಅವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಇವರು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಅವಕಾಶ ಪಡೆದಿರಲಿಲ್ಲ. ಇನ್ನು ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಸಹ ಟಿ20 ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕನ್ನಡಿಗನಿಗೆ ಸ್ಥಾನ
ಕರ್ನಾಟಕದ ಯುವ ವೇಗದ ಬೌಲರ್ ವಿಜಯಕುಮಾರ್ ವೈಶಾಖ್ ಅವರಿಗೂ ಅವಕಾಶ ಲಭಿಸಿದೆ. ಇವರು ಇದೇ ಮೊದಲ ಬಾರಿಗೆ ಭಾರತ ತಂಡವನ್ನು ಸೇರಿದ್ದಾರೆ. ಐಪಿಎಲ್‌ನಲ್ಲಿ ಅಮೋಘ ದಾಳಿಯನ್ನು ಸಂಘಟಿಸಿ ಇವರು ಎಲ್ಲರ ಚಿತ್ತ ಕದ್ದಿದ್ದರು. ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ವಿಜಯ್ ಬಿಗುವಿನ ದಾಳಿಯನ್ನು ನಡೆಸಬಲ್ಲರು. ಆರ್‌ಸಿಬಿ ತಂಡದ ಭಾಗವಾಗಿದ್ದ ವಿಜಯ್ ಕುಮಾರ್ ವೈಶಾಖ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಪ್ರಕಟಿತ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್ ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications