ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಣ ಏಕದಿನ ಸರಣಿಗೆ ದಿನಗಣನೆ ಆರಂಭವಾಗಿದೆ. ಮೂರು ಪಂದ್ಯಗಳ ಸರಣಿಗೆ ಈಗಾಗಲೇ ಉಭಯ ತಂಡಗಳನ್ನು ಪ್ರಕಟಿಸಲಾಗಿದೆ. ಈ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಪೆಟ್ಟು ಬಿದ್ದಿದೆ. ಆಸ್ಟ್ರೇಲಿಯಾದ ಅನುಭವಿ ಇಬ್ಬರು ಆಟಗಾರರು ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಆಸ್ಟ್ರೇಲಿಯಾದ ಅನುಭವಿ ಲೆಗ್ ಸ್ಪಿನ್ ಆಡಂ ಜಂಪಾ ಹಾಗೂ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇವರಿಬ್ಬರ ಸ್ಥಾನದಲ್ಲಿ ಮ್ಯಾಥ್ಯೂ ಕುಹ್ನೆಮನ್ ಮತ್ತು ಜೋಶ್ ಫಿಲಿಪ್ ಅವರನ್ನು ತಂಡಕ್ಕೆ ಸೇರಿಸಿಲಾಗಿದೆ. ವೈಯಕ್ತಿಕ ಕಾರಣಗಳಿಂದಾಗಿ ಜಂಪಾ ಮೊದಲ ಪಂದ್ಯದಲ್ಲಿ ಹಿಂದಿದ್ದಾರೆ. ಆಶಸ್ ಸರಣಿಯ ತಯಾರಿಗಾಗಿ ಅಲೆಕ್ಸ್ ಕ್ಯಾರಿ ಭಾರತ ವಿರುದ್ಧದ ಸರಣಿಯಿಂದ ಹೊರ ಗುಳಿದಿದ್ದಾರೆ. ಇವರು ಶೆಫೀಲ್ಡ್ ಶೀಲ್ಡ್ ಪಂದ್ಯದಲ್ಲಿ ಆಡಲಿದ್ದಾರೆ.

ಆಡಂ ಜಂಪಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಮೊದಲ ಪಂದ್ಯದಿಂದ ದೂರ ಉಳಿಯಲಿದ್ದಾರೆ. ಹೀಗಾಗಿ ಈ ವೇಳೆ ಪರ್ತ್‌ನಿಂದ ನ್ಯೂ ಸೌತ್ ವೇಲ್ಸ್‌ಗೆ ಪ್ರವಾಸ ಮಾಡಲು ಕಷ್ಟವಾಗುವದರಿಂದ, ಜಂಪಾ ಮನೆಯಲ್ಲಿ ಇರಲು ತೀರ್ಮಾನಿಸಿದ್ದಾರೆ. ಇವರು 2 ಹಾಗೂ 3ನೇ ಏಕದಿನ ಪಂದ್ಯಕ್ಕೆ ತಂಡ ಸೇರುವ ಸಾಧ್ಯತೆ ಇದೆ. ಇವರು ಭಾರತ ವಿರುದ್ಧ ಪಂದ್ಯಗಳ ಟಿ20 ಆಡಲಿದ್ದಾರೆ.
ಮೂರು ವರ್ಷಗಳ ನಂತರ ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ಮ್ಯಾಥ್ಯೂ ಕುಹ್ನೆಮನ್ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ಇವರು ತವರಿನಲ್ಲಿ ಮೊದಲ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ. ಇವರು 2022ರಲ್ಲಿ ಶ್ರೀಲಂಕಾ ವಿರುದ್ಧದ ಸರಣಿಯನ್ನು ಅಡಿದ್ದರು. ಇವರು ಈಗಾಗಲೇ ಆಸ್ಟ್ರೇಲಿಯಾ ಪರ ಟೆಸ್ಟ್ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೇರಿದಂತೆ ಹಲುವ ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದರು, ಆದರೆ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗಿತ್ತು. ಇವರು ಮೊದಲ ಪಂದ್ಯಕ್ಕೆ ಫಿಟ್ ಆಗುವ ಸಾಧ್ಯತೆ ಇದೆ.
28 ವರ್ಷದ ಜೋಶ್ ಫಿಲಿಪ್ ಈಗಾಗಲೇ ಆಸ್ಟ್ರೇಲಿಯಾ ಪರ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಿದ್ದಾರೆ. ಪರ್ತ್‌ನಲ್ಲಿ ಇವರು ಭಾರತದ ವಿರುದ್ಧ ಪಂದ್ಯವನ್ನು ಆಡಿದರೆ ಅವರ ವೃತ್ತಿ ಜೀವನದ 4ನೇ ಏಕದಿನ ಪಂದ್ಯವಾಗಿರಲಿದೆ. ಒಟ್ಟಾರೆ 15 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 215 ರನ್‌ಗಳನ್ನು ಕಲೆ ಹಾಕಿದ್ದಾರೆ.
ಭಾರತ ವಿರುದ್ಧದ ಆಸ್ಟ್ರೇಲಿಯಾದ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲಿ, ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ.