IPL: 2008ರಿಂದ 2023ರವರೆಗೆ ಚಾಂಪಿಯನ್ಸ್ ಹಾಗೂ ರನ್ನರ್ ಅಪ್ ಆದ ತಂಡಗಳ ಪಟ್ಟಿ

ನಿನ್ನೆ ( ಮೇ 29 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ರೋಚಕ ಜಯ ಸಾಧಿಸುವುದರ ಮೂಲಕ ಐದನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
ಮೊನ್ನೆಯೇ ಮುಕ್ತಾಯಗೊಳ್ಳಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದ ಕಾರಣ ನಿನ್ನೆಯ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿತ್ತು. ಆದರೆ ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡು ಎರಡನೇ ಇನ್ನಿಂಗ್ಸ್ ಆರಂಭಗೊಳ್ಳುತ್ತಿದ್ದಂತೆ ಮತ್ತೆ ಮಳೆ ಸುರಿಯಲಾರಂಭಿಸಿತು. ಮಳೆಯ ಹೊಡೆತಕ್ಕೆ ಪಂದ್ಯ ಐದು ಓವರ್ ಕಡಿತಗೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು.
ಮಳೆಯ ಕಾರಣದಿಂದಾಗಿ 15 ಓವರ್‌ಗಳಿಗೆ ಪಂದ್ಯ ಕುಸಿದು ಚೆನ್ನೈ ಸೂಪರ್ ಕಿಂಗ್ಸ್ 15 ಓವರ್‌ಗಳಲ್ಲಿ 171 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 15 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ 5 ವಿಕೆಟ್‌ಗಳ ಗೆಲುವನ್ನು ಕಂಡಿತು.
ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್ ಆಗಿದ್ದು, ಗುಜರಾತ್ ಟೈಟನ್ಸ್ ರನ್ನರ್ ಅಪ್ ಆಗಿದೆ. ಹಾಗಿದ್ದರೆ ಇಲ್ಲಿಯವರೆಗೂ ನಡೆದಿರುವ ಎಲ್ಲಾ ಐಪಿಎಲ್ ಆವೃತ್ತಿಗಳಲ್ಲಿ ಯಾವ ತಂಡಗಳು ಚಾಂಪಿಯನ್ ಆಗಿವೆ ಹಾಗೂ ಯಾವ ತಂಡಗಳು ರನ್ನರ್ ಅಪ್ ಆಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
* 2008ರ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಆಗಿತ್ತು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಆಗಿತ್ತು.
* 2009ರ ಐಪಿಎಲ್ ಟೂರ್ನಿಯಲ್ಲಿ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್ ಆಗಿತ್ತು ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್ನರ್ ಅಪ್ ಆಗಿತ್ತು.
* 2010ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು ಹಾಗೂ ಮುಂಬೈ ಇಂಡಿಯನ್ಸ್ ರನ್ನರ್ ಅಪ್ ಆಗಿತ್ತು.
* 2011ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್ನರ್ ಅಪ್ ಆಗಿತ್ತು.
* 2012ರ ಐಪಿಎಲ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿತ್ತು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಆಗಿತ್ತು.
* 2013ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಆಗಿತ್ತು.
* 2014ರ ಐಪಿಎಲ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿತ್ತು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ರನ್ನರ್ ಅಪ್ ಆಗಿತ್ತು.
* 2015ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಆಗಿತ್ತು.
* 2016ರ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಚಾಂಪಿಯನ್ ಆಗಿತ್ತು ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್ನರ್ ಅಪ್ ಆಗಿತ್ತು.
* 2017ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು ಹಾಗೂ ರೈಸಿಂಗ್ ಪುಣೆ ಸೂಪರ್ ಜಿಯಂಟ್ಸ್ ರನ್ನರ್ ಅಪ್ ಆಗಿತ್ತು.
* 2018ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು ಹಾಗೂ ಸನ್ ರೈಸರ್ಸ್ ಹೈದರಾಬಾದ್ ರನ್ನರ್ ಅಪ್ ಆಗಿತ್ತು.
* 2019ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್ ಆಗಿತ್ತು.
* 2020ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ರನ್ನರ್ ಅಪ್ ಆಗಿತ್ತು.
* 2021ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿತ್ತು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ರನ್ನರ್ ಅಪ್ ಆಗಿತ್ತು.
* 2022ರ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ಚಾಂಪಿಯನ್ ಆಗಿತ್ತು ಹಾಗೂ ರಾಜಸ್ಥಾನ್ ರಾಯಲ್ಸ್ ರನ್ನರ್ ಅಪ್ ಆಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications