IPL: ಗೆಲುವಿಗಾಗಿ ಸನ್ ರೈಸರ್ಸ್ ಗೆ 173 ರನ್ ಗುರಿ ನೀಡಿದ ಕೋಲ್ಕತಾ
ಕೋಲ್ಕತಾ, ಏಪ್ರಿಲ್ 15: ಇಲ್ಲಿನ ಈಡನ್ ಗಾರ್ಡನ್ ನಲ್ಲಿ ಶನಿವಾರ ಮಧ್ಯಾಹ್ನ ಆರಂಭವಾದ ಸನ್ ರೈಸರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಗೆ ಇಳಿದ ಕೋಲ್ಕತಾ ನೈಟ್ ರೈಡರ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತು.
ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ 4ಕ್ಕೆ ಆರಂಭವಾದ ಪಂದ್ಯಕ್ಕೂ ಮುನ್ನ ಟಾಸ್ ಗೆದ್ದ ಸನ್ ರೈಸರ್ಸ್ ತಂಡದ ನಾಯಕ ಡೇವಿಡ್ ವಾರ್ನರ್, ಆತಿಥೇಯರನ್ನು ಮೊದಲು ಕಣಕ್ಕಿಳಿಸಿದರು.
ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಕೋಲ್ಕತಾ, ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.

ಎದುರಾಳಿಗಳ ಬೌಲಿಂಗ್ ಆರ್ಭಟಕ್ಕೆ ಆರಂಭಿಕ ಸುನಿಲ್ ನರೇನ್ ಹಾಗೂ ಗೌತಮ್ ಗಂಭೀರ್ ಅವರನ್ನು ಬೇಗನೇ ಕಳೆದುಕೊಂಡರೂ, ಮಧ್ಯಮ ಕ್ರಮಾಂಕದಲ್ಲಿ ರಾಬಿನ್ ಉತ್ತಪ್ಪ ಸಿಡಿಸಿದ ಭರ್ಜರಿ ಅರ್ಧಶತಕದ (68 ರನ್, 39 ಎಸೆತ, 5 ಬೌಂಡರಿ, 4 ಸಿಕ್ಸರ್) ಸಹಾಯದಿಂದ ಕೋಲ್ಕತಾ ತಂಡ ಈ ಮೊತ್ತ ಗಳಿಸಲು ಸಾಧ್ಯವಾಯಿತು.
ರಾಬಿನ್ ಔಟಾದ ನಂತರ, ಯೂಸುಫ್ ಪಠಾಣ್ ಮಿಂಚಿನ ಆಟವಾಡಿ ತಂಡದ ಮೊತ್ತ ಹೆಚ್ಚಲು ನೆರವಾದರು.[ಸ್ಕೋರ್ ಬೋರ್ಡ್]
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications