ಅಭಿಮಾನಿಗಳಿಗೆ ಆಘಾತ! ಐಪಿಎಲ್ ಕೆಲ ಪಂದ್ಯಗಳಿಗೆ ಕೊಹ್ಲಿ ಅಲಭ್ಯ

Posted By:

ಬೆಂಗಳೂರು, ಮಾರ್ಚ್ 28: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಗೆದ್ದು ಬೀಗಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಫೀಲ್ಡ್ ಮಾಡುವಾಗ ಗಾಯಗೊಂಡು ನಾಲ್ಕನೇ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಕೊಹ್ಲಿ ಅಭಿಮಾನಿಗಳಿಗೆ ಕಹಿ ಸುದ್ದಿ ಇಲ್ಲಿದೆ.

ಬಲಭುಜಕ್ಕೆ ಗಾಯಮಾಡಿಕೊಂಡಿದ್ದ ಕೊಹ್ಲಿ ಅವರು ನಾಲ್ಕನೇ ಪಂದ್ಯದಿಂದ ಸಂಪೂರ್ಣವಾಗಿ ಹೊರಗುಳಿದಿದ್ದರು. ಕೊಹ್ಲಿ ಬದಲಿಗೆ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಿದ್ದರು.

IPL 2017: With still not 100% fit, Virat Kohli set to miss couple of matches

ಇಂಡಿಯನ್ ಪ್ರಿಮೀಯರ್ ಲೀಗ್ ಆಡುವುದಕ್ಕಾಗಿ ಕೊಹ್ಲಿ ಅವರು ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂಬ ಟೀಕೆ ಕೂಡಾ ಕೇಳಿ ಬಂದಿತ್ತು. ಇನ್ನೂ ಪೂರ್ಣ ಪ್ರಮಾಣವಾಗಿ ಗುಣಮುಖರಾಗದ ಕಾರಣ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಪರ ಐಪಿಎಲ್ 10 ನಲ್ಲಿ ಕೆಲ ಪಂದ್ಯಗಳಿಂದ ದೂರ ಉಳಿಯಲಿದ್ದಾರೆ.

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Tuesday, March 28, 2017, 12:45 [IST]
Other articles published on Mar 28, 2017

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ