IPL 2019, CSK vs RCB: ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ XI ಆಟಗಾರರು

ಚೆನ್ನೈ, ಮಾರ್ಚ್ 22: ಶನಿವಾರ (ಮಾರ್ಚ್ 23) ಚೆನ್ನೈನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ನೇ ಆವೃತ್ತಿ ಆರಂಭಗೊಳ್ಳುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ.
ಪಂದ್ಯದ live Score, Score Card ಕೆಳಗಿದೆ
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದ ಆರ್‌ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲೇ ಜಯ ಗಳಿಸಿ ಶುಭಾರಂಭ ಕಾಣುವ ಯೋಜನೆಯಲ್ಲಿದೆ. ಆದರೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದ ಸಿಎಸ್‌ಕೆ ವಿರುದ್ಧ ಗೆಲ್ಲೋದು ಸುಲಭವಿಲ್ಲ.
ಮೂರು ಬಾರಿ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿಗೆ ಸವಾಲೊಡ್ಡುವುದಂತೂ ಪಕ್ಕ. ಅದೂ ತವರಿನಲ್ಲೇ ಪಂದ್ಯ ನಡೆಯುತ್ತಿರುವುದರಿಂದ ಚೆನ್ನೈ ತಂಡವೇ ಗೆಲ್ಲುವ ಫೇವರಿಟ್ ಎನಿಸಿದೆ. ಹಾಗಂತ ಆರ್‌ಸಿಬಿಯನ್ನು ಕಡೆಗಣಿಸುವಂತಿಲ್ಲ. ಈ ಬಾರಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ ಜಾಣ ಆಟ ಪ್ರದರ್ಶಿಸಿದರೆ ಮೊದಲ ಪಂದ್ಯದಲ್ಲೇ ಗೆಲುವು ಸಾಧ್ಯವಿದೆ.
ಸಿಎಸ್‌ಕೆ ಸಂಭಾವ್ಯ ಆಟಗಾರರ ಪಟ್ಟಿ ಹೀಗಿದೆ: ಅಂಬಾಟಿ ರಾಯುಡು, ಶೇನ್ ವಾಟ್ಸನ್, ಸುರೇಶ್ ರೈನಾ, ಕೇದಾರ್ ಜಾಧವ್, ಎಂಎಸ್ ಧೋನಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಡೇವಿಡ್ ವಿಲ್ಲೆ, ದೀಪಕ್ ಚಾಹರ್, ಇಮ್ರಾನ್ ತಾಹಿರ್, ಶಾರ್ದೂಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications