ಐಪಿಎಲ್: ಪ್ಲೇ ಆಫ್ಸ್‌ಗೆ ಡೆಲ್ಲಿ ಕ್ಯಾಪಿಟಲ್ಸ್, ಆರ್‌ಸಿಬಿ ಔಟ್

ಹೊಸದಿಲ್ಲಿ, ಏಪ್ರಿಲ್ 28: ಶಿಖರ್ ಧವನ್ (50) ಮತ್ತು ಶ್ರೇಯಸ್ ಅಯ್ಯರ್ (52) ಅವರ ಭರ್ಜರಿ ಬ್ಯಾಟಿಂಗ್ ಮತ್ತು ಬೌಲರ್‌ಗಳ ಶಿಸ್ತಿನ ದಾಳಿಯ ಮೂಲಕ ಮಿಂಚಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 16 ರನ್‌ಗಳ ಜಯ ದಾಖಲಿಸಿ ಪ್ಲೇಆಫ್ಸ್ ತಲುಪಿದೆ.
ಇಲ್ಲಿನ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2019ರ 46ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕ್ಯಾಪಿಟಲ್ಸ್, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 187 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು.
ಬಳಿಕ ಗುರಿ ಬೆನ್ನತ್ತಿದ ಚಾಲೆಂಜರ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 171 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿ ಪ್ಲೇ ಆಫ್ಸ್ ರೇಸ್‌ನಿಂದ ಹೊರಬಿದ್ದಿದೆ.
ಈ ಗೆಲುವಿನೊಂದಿಗೆ ಡೆಲ್ಲಿ ತಂಡ 2012ರ ಬಳಿಕ ಇದೇ ಮೊದಲ ಬಾರಿ ಪ್ಲೇ ಆಫ್ಸ್ ತಲುಪಿದ ಸಾಧನೆ ಮಾಡಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಒಟ್ಟು 16 ಅಂಕಗಳೊಂದಿಗೆ ಉತ್ತಮ ರನ್‌ರೇಟ್ ಮೂಲಕ ಅಷ್ಟೇ ಅಂಕಗಳನ್ನು ಗಳಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೇರಿದೆ.
ಕ್ಯಾಪಿಟಲ್ಸ್ ಪ್ಲೇಯಿಂಗ್ 11
ಪೃಥ್ವಿ ಶಾ, ಶಿಖರ್ ಧವನ್, ಕಾಲಿನ್ ಇಂಗ್ರಮ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶೆರ್ಫೇನ್ ರುದರ್‌ಫೋರ್ಡ್, ಸಂದೀಪ್ ಲಾಮಿಚ್ಚಾನೆ, ಅಕ್ಷರ್ ಪಟೇಲ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಇಶಾಂತ್ ಶರ್ಮಾ.
ಆರ್‌ಸಿಬಿ ಪ್ಲೇಯಿಂಗ್ 11
ಪಾರ್ಥಿವ್ ಪಟೇಲ್, ವಿರಾಟ್ ಕೊಹ್ಲಿ, ಎಬಿ ಡಿ'ವಿಲಿಯರ್ಸ್, ಹೆನ್ರಿಚ್ ಕ್ಲಾಸೆನ್, ಗುರುಕೀರತ್ ಸಿಂಗ್, ಶಿವಮ್ ದುಬೆ, ಮಾರ್ಕಸ್ ಸ್ಟೋಯ್ನಿಸ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ನವದೀಪ್ ಸೈನಿ, ಉಮೇಶ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications