For Quick Alerts
ALLOW NOTIFICATIONS  
For Daily Alerts
 

ಬೆಂಗಳೂರಲ್ಲಿ ಆರ್ ಸಿಬಿ vs ಮುಂಬೈ ಪಂದ್ಯ, ವಾಹನ ನಿಲುಗಡೆ ಎಲ್ಲೆಲ್ಲಿ?

IPL 2019 : RCB vs Mumbai Indians match Parking of Vehicles is prohibited Parking

ಬೆಂಗಳೂರು, ಮಾರ್ಚ್ 27: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್ 28ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಎರಡನೇ ಪಂದ್ಯವಾಡಲಿದೆ.

ಈ ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ವಾಹನಗಳಲ್ಲಿ ಬರುವುದರಿಂದ ಕೆ.ಎಸ್.ಸಿ.ಎ. ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಈ ಕೆಳಕಂಡಂತೆ ಸಂಚಾರ ನಿರ್ಬಂಧನೆ ಮಾಡಲಾಗಿರುತ್ತದೆ.

ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2-00 ಗಂಟೆಯಿಂದ ರಾತ್ರಿ 11-30 ಗಂಟೆಯವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

1. ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.

2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.

3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ.

4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.

5. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.

ಸ್ಟೇಡಿಯಂಗೆ ತೆರಳುವ ಗೇಟ್ ಗಳ ವಿವರ

ಸ್ಟೇಡಿಯಂಗೆ ತೆರಳುವ ಗೇಟ್ ಗಳ ವಿವರ

ಚಿನ್ನಸ್ವಾಮಿ ಸ್ಟೇಡಿಯಂ ಒಳ ಮತ್ತು ಹೊರ ಹೋಗಲು ಪ್ರೇಕ್ಷಕರುಗಳಿಗೆ (ಪಾದಚಾರಿಗಳಿಗೆ)
ಅನುವು ಮಾಡಿರುವ ಬಗ್ಗೆ :-
1. ಗೇಟ್‍ನಂ-1 ರಿಂದ ಗೇಟ್ ನಂ-6 ಕಬ್ಬನ್ ರಸ್ತೆಯಲ್ಲಿದ್ದು ಪಾದಚಾರಿಗಳಿಗೆ / ವೀಕ್ಷಕರುಗಳಿಗೆ ಹೋಗಲು ಅವಕಾಶ ಕಲ್ಪಿಸಿದೆ.
2. ಗೇಟ್ ನಂ.7 ರಿಂದ ಗೇಟ್ ನಂ 11 ರವರೆಗೆ ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತ ಮತ್ತು ಬಿ.ಆರ್.ವಿ. ವೃತ್ತದ ಕಡೆಯಿಂದ ಪ್ರೇಕ್ಷಕರುಗಳು/ಪಾದಚಾರಿಗಳು ಹೋಗಬಹುದಾಗಿರುತ್ತದೆ.
3. ಗೇಟ್ ನಂ. 12 ರಿಂದ 21 ವರೆಗೆ ಕ್ವೀನ್ಸ್ ರಸ್ತೆಯಲ್ಲಿದ್ದು, ಇಲ್ಲಿಗೆ ಪಾದಚಾರಿ/ವೀಕ್ಷಕರುಗಳಿಗೆ ಪ್ರವೇಶವನ್ನು ಕಲ್ಪಿಸಲಾಗಿರುತ್ತದೆ.

ಐಪಿಎಲ್: ಯುವಿ ಹೋರಾಟ ವ್ಯರ್ಥ, ಕ್ಯಾಪಿಟಲ್ಸ್‌ಗೆ ಶರಣಾದ ಇಂಡಿಯನ್ಸ್!

ವಾಹನ ಕಡ್ಡಾಯ ನಿಷೇಧ

ವಾಹನ ಕಡ್ಡಾಯ ನಿಷೇಧ

6. ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‍ನಿಂದ ಡಿಕೆನ್ಸ್‍ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.

7. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ.
8. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾಕ್ರ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ
9. ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‍ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
10. ಕಬ್ಬನ್‍ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿsಸಲಾಗಿದೆ
11. ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‍ವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿsಸಲಾಗಿದೆ
12. ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾಕ್ರ್ಸ್ ರಸ್ತೆಯ ಬಿಷಪ್‍ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ

ಆಟೋ ರಿಕ್ಷಾ ವಾಹನಗಳ ಸಂಚಾರ ನಿಷೇಧ

ಆಟೋ ರಿಕ್ಷಾ ವಾಹನಗಳ ಸಂಚಾರ ನಿಷೇಧ

ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 5-00 ಗಂಟೆಯಿಂದ ರಾತ್ರಿ 11-30 ಗಂಟೆಯವರೆಗೆ ಆಟೋ ರಿಕ್ಷಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

1. ಕ್ವೀನ್ಸ್ ರಸ್ತೆ, ಟ್ರಾಫಿಕ್ ಹೆಡ್‍ಕ್ವಾರ್ಟರ್ ಜಂಕ್ಷನ್ ನಿಂದ ಕ್ವೀನ್ಸ್ ವೃತ್ತದ ವರೆಗೆ (ರಸ್ತೆಯ ಎರಡೂ ಬದಿ)
2. ಕಬ್ಬನ್ ರಸ್ತೆ, ಬಿ.ಆರ್.ವಿ. ಜಂಕ್ಷನ್ ನಿಂದ ಸಿ.ಟಿ.ಓ. ವೃತ್ತದ ವರೆಗೆ (ರಸ್ತೆಯ ಎರಡೂ ಬದಿ)
3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.

'ಮಾಂಕೆಡೆಡ್‌' ಎಂದರೇನು? ಅಶ್ವಿನ್ ಮಾಡಿದ್ದು ಸರಿಯೋ, ತಪ್ಪೋ?

ವಾಹನಗಳ ನಿಲುಗಡೆಗೆ ವ್ಯವಸ್ಥೆ ಎಲ್ಲೆಲ್ಲಿ?

ವಾಹನಗಳ ನಿಲುಗಡೆಗೆ ವ್ಯವಸ್ಥೆ ಎಲ್ಲೆಲ್ಲಿ?

ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2-00 ಗಂಟೆಯಿಂದ ರಾತ್ರಿ 11-30 ಗಂಟೆವರೆಗೆ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿರುತ್ತದೆ.

1. ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಬೌರಿಂಗ್ ಇನ್ಸ್ಟಿಟ್ಯೂಟ್ ಮತ್ತು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ಇಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
4. ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಮುತ್ತ ವಾಹನಗಳ ನಿಲುಗಡೆ ಸ್ಥಳ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಮುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿ.ಎಂ.ಟಿ.ಸಿ) ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಕೋರಿದೆ.
5. ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಾಹನಗಳನ್ನು ಕಬ್ಬನ್‍ಪಾರ್ಕ್ ಒಳಭಾಗದ ಕೆ.ಜಿ.ಐ.ಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
6. ಎಂ.ಜಿ.ರಸ್ತೆಯಲ್ಲಿರುವ ಫ್ರೀಪೇಯ್ಡ್ ಆಟೋ ನಿಲ್ದಾಣವನ್ನು ಬಳಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Story first published: Wednesday, March 27, 2019, 12:14 [IST]
Other articles published on Mar 27, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+