ಟೇಬಲ್ ಟಾಪರ್ಸ್ ಸೂಪರ್ ಕಿಂಗ್ಸ್ ಸವಾಲಿಗೆ ಸಜ್ಜಾದ ಸನ್‌ರೈಸರ್ಸ್

ಹೈದರಾಬಾದ್, ಏಪ್ರಿಲ್ 17: ಸ್ಥಿರ ಪ್ರದರ್ಶನ ಕಾಯ್ದುಕೊಳ್ಳಲು ಪರದಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ 2019ರ ಐಪಿಎಲ್‌ನ ಲೀಗ್ ಹಂತದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಪ್ರಥಮ ಬಾರಿ ಪೈಪೋಟಿ ನಡೆಸುತ್ತಿದ್ದು, ಹ್ಯಾಟ್ರಿಕ್ ಸೋಲಿನ ಬಳಿಕ ಮೊದಲ ಗೆಲುವಿಗಾಗಿ ಹೋರಾಡಲಿದೆ.
ಡೇವಿಡ್ ವಾರ್ನರ್, ಜಾನಿ ಬೈರ್‌ಸ್ಟೋವ್ ಹಾಗೂ ರಶೀದ್ ಖಾನ್ ಅವರಂತಹ ಸ್ಟಾರ್ ಆಟಗಾರರ ಬಲ ಹೊಂದಿರುವ ಸನ್‌ರೈಸರ್ಸ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲಗೊಂಡಿದೆ. ಈವರೆಗೆ ಆಡಿದ 7 ಪಂದ್ಯಗಳಲ್ಲಿ 3 ಪಂದ್ಯಗಳನ್ನು ಗೆದ್ದಿರುವ ರೈಸರ್ಸ್, ನಾಲ್ಕು ಪಂದ್ಯಗಳಲ್ಲಿ ಮುಗ್ಗರಿಸಿದ್ದು ಅಂಕ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದೆ.
ಮತ್ತೊಂದೆಡೆ ಕಳೆದ ಆವೃತ್ತಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಅಮೋಘ ಲಯದಲ್ಲಿದ್ದು , ಮುಂಬಯಿ ಇಂಡಿಯನ್ಸ್ ವಿರುದ್ಧ ಅನುಭವಿಸಿದ ಏಕೈಕ ಸೋಲಿನ ಹೊರತಾಗಿ ಉಳಿದೆಲ್ಲ ಪಂದ್ಯಗಳನ್ನು ಗೆದ್ದು ಬೀಗಿದೆ. 8 ಪಂದ್ಯಗಳಲ್ಲಿ 7 ಜಯದೊಂದಿಗೆ ಈಗಾಗಲೇ 14 ಅಂಕಗಳನ್ನು ಕಲೆಹಾಕಿರುವ ಕಿಂಗ್ಸ್ ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಪ್ಲೇ ಆಫ್ಸ್ ತಲುಪಿದ ಮೊದಲ ತಂಡ ಎನಿಸಿಕೊಳ್ಳುವತ್ತ ಮುನ್ನುಗ್ಗಿದೆ.
ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸನ್‌ರೈಸರ್ಸ್ ತನ್ನ ಹೈದರಾಬಾದ್ ಕೋಟೆಯಲ್ಲಿ ಕಟ್ಟಿಹಾಕಬಲ್ಲದೆ ಎಂಬುದನ್ನು ಕಾದು ನೋಡಬೇಕಿದೆ.
ಸನ್‌ರೈಸರ್ಸ್ ಸಂಭಾವ್ಯ 11
ಡೇವಿಡ್ ವಾರ್ನರ್, ಜಾನಿ ಬೈರ್‌ಸ್ಟೋವ್, ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ವಿಜಯ್ ಶಂಕರ್, ದೀಪಕ್ ಹೂಡ, ಅಭಿಷೇಕ್ ಶರ್ಮಾ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.
ಸೂಪರ್ ಕಿಂಗ್ಸ್ ಸಂಭಾವ್ಯ 11
ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಕೇದಾರ್ ಜಾಧವ್, ಎಂ.ಎಸ್ ಧೋನಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಇಮ್ರಾನ್ ತಾಹಿರ್, ಶಾರ್ದುಲ್ ಠಾಕೂರ್, ದೀಪಕ್ ಚಹರ್.
ಐಪಿಎಲ್ 2019 ವಿಶೇಷ ಪುಟ | ಗ್ಯಾಲರಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications