ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಪದಾರ್ಪಣೆ ಮಾಡಿದ ಬಿಗ್‌ಬ್ಯಾಶ್ ಸ್ಟಾರ್ ಡೇನಿಯಲ್ ಸ್ಯಾಮ್ಸ್

IPL 2020: BBL star Daniel Sams debuts for Delhi Capitals

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಕಣಕ್ಕಿಳಿಯುವ ಮೂಲಕ ಆಸ್ಟ್ರೇಲಿಯಾದ ಆಲ್‌ರೌಂಡರ್ ಡೇನಿಯಲ್ ಸ್ಯಾಮ್ಸ್ ಐಪಿಎಲ್‌ಗೆ ಪದಾರ್ಪಣೆಯನ್ನು ಮಾಡಿದ್ದಾರೆ. ಇಂಗ್ಲೆಂಡ್ ತಂಡದ ಆಟಗಾರ ಜೇಸನ್ ರಾಯ್‌ಗೆ ಬದಲಿ ಆಟಗಾರನಾಗಿ ಡೆಲ್ಲಿ ತಂಡವನ್ನು ಸೇರಿಕೊಂಡರು ಸ್ಯಾಮ್ಸ್.

ಡೇನಿಯಲ್ ಸ್ಯಾಮ್ಸ್, ಆಸ್ಟ್ರೇಲಿಯಾದ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಸಾಕಷ್ಟು ಸದ್ದು ಮಾಡಿದ ಆಟಗಾರ. ಆಸ್ಟ್ರೇಲಿಯಾದ ಕ್ರಿಕೆಟ್ ಲೀಗ್ ಬಿಗ್‌ಬ್ಯಾಶ್ ಟೂರ್ನಿಯ ಕಳೆದ ಎರಡು ಆವೃತ್ತಿಯಲ್ಲಿ ಸ್ಯಾಮ್ಸ್ ಶ್ರೇಷ್ಠ ಪ್ರದರ್ಶನದ ಮೂಲಕ ಗಮನಸೆಳೆದಿದ್ದಾರೆ. 17 ಪಂದ್ಯಗಳಲ್ಲಿ 30 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದ್ದರು ಸ್ಯಾಮ್ಸ್‌.

ಐಪಿಎಲ್ 2020: ಡೆಲ್ಲಿ ತಂಡದ ಪ್ರದರ್ಶನದ ಬಗ್ಗೆ ಮೊಹಮ್ಮದ್ ಕೈಫ್ ಹೇಳಿದ್ದಿಷ್ಟು!ಐಪಿಎಲ್ 2020: ಡೆಲ್ಲಿ ತಂಡದ ಪ್ರದರ್ಶನದ ಬಗ್ಗೆ ಮೊಹಮ್ಮದ್ ಕೈಫ್ ಹೇಳಿದ್ದಿಷ್ಟು!

ಬಿಬಿಎಲ್ ಟೂರ್ನಿಯಲ್ಲಿ ದಾಖಲೆಯ ವಿಕೆಟ್ ಪಡೆದ ಸ್ಯಾಮ್ಸ್ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದರು. ಮಾತ್ರವಲ್ಲ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲಿ ಮೊದಲ ಬಾರಿಗೆ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲೂ ಯಶಸ್ವಿಯಾಗಿದ್ದರು.

ಬಿಗ್‌ಬ್ಯಾಶ್ ಕ್ರಿಕೆಟ್ ಲೀಗ್‌ನಲ್ಲಿ ಮಿಂಚಿದ ಸ್ಯಾಮ್ಸ್ ಈಗ ಐಪಿಎಲ್‌ನಲ್ಲೂ ಕಣಕ್ಕಿಳಿದಿದ್ದಾರೆ. ಯುಎಇನಲ್ಲಿ ನಡೆಯುವ ಈ ಟೂರ್ನಿಯಲ್ಲಿ ಸ್ಯಾಮ್ಸ್ ಯಾವ ರೀತಿಯ ಪ್ರದರ್ಶನವನ್ನು ನೀಡಲಿದ್ದಾರೆ ಎಂಬುದು ಸಾಕಷ್ಟು ಕುತೂಹಲವನ್ನು ಮೂಡಿಸಿದೆ.

ಕ್ರಿಕೆಟ್ ಮರೆತಂತೆ ಆಡುವ ಜಾಧವ್ ತಂಡಕ್ಕೆ ಆಯ್ಕೆ ಮಾಡಿದ್ದೇಕೆ?ಕ್ರಿಕೆಟ್ ಮರೆತಂತೆ ಆಡುವ ಜಾಧವ್ ತಂಡಕ್ಕೆ ಆಯ್ಕೆ ಮಾಡಿದ್ದೇಕೆ?

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂಕಪಟ್ಟಿಯಲ್ಲಿ ಸದ್ಯ ಮೊದಲ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಇನ್ನೊಂದೇ ಪಂದ್ಯವನ್ನು ಗೆದ್ದರೆ ತಮ್ಮ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

Story first published: Wednesday, October 21, 2020, 10:27 [IST]
Other articles published on Oct 21, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X