ಐಪಿಎಲ್ 2020: ಕ್ರೈಸ್ಟ್‌ಚರ್ಚ್‌ನಲ್ಲಿ ಅಭ್ಯಾಸದಲ್ಲಿ ಪಾಲ್ಗೊಂಡ ಬೆನ್ ಸ್ಟೋಕ್ಸ್

ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್‌ಗೆ ಲಭ್ಯತೆಯ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ದೊರೆತಿಲ್ಲ. ಆದರೆ ಐಪಿಎಲ್ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ಇನ್ಸ್ಟಾಗ್ರಾಮ್‌ನಲ್ಲಿ ಮಾಡಿದ ಪೋಸ್ಟ್ ರಾಜಸ್ಥಾನ್ ರಾಯಲ್ಸ್ ಅಭಿಮಾನಿಗಳಲ್ಲಿ ಭರವಸೆಯನ್ನು ಹೆಚ್ಚಿಸಿದೆ. ರಾಜಸ್ಥಾನ್ ರಾಯಲ್ಸ್ ಪರವಾಗಿ ಸ್ಟೋಕ್ಸ್ ಆಡುವುದು ಖಚಿತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ಕಳೆದ ತಿಂಗಳು ನಡೆದ ಪಾಕಿಸ್ತಾನ ವಿರುದ್ದದ ಟೆಸ್ಟ್ ಸರಣಿಯ ಮಧ್ಯದಲ್ಲಿ ತನ್ನ ತವರು ನ್ಯೂಜಲೆಂಡ್‌ನ ಕ್ರೈಸ್ಟ್‌ಚರ್ಚ್‌ಗೆ ಮರಳಿದ್ದರು. ಇಂಗ್ಲೆಂಡ್ ತಂಡದ ಪ್ರಮುಖ ಆಲ್‌ರೌಂಡರ್ ಆಗಿರುವ ಬೆನ್ ಸ್ಟೋಕ್ಸ್ ಕೌಟುಂಬಿಕ ಕಾರಣಗಳಿಂದಾಗಿ ವಾಪಾಸ್ಸಾಗಿದ್ದರು.
ಬೆನ್ ಸ್ಟೋಕ್ಸ್ ತಂದೆ ಮೆದುಳು ಕ್ಯಾನ್ಸರ್‌ಗೆ ತುತ್ತಾಗಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಪಾಕಿಸ್ತಾನ ವಿರುದ್ಧದ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಬೆನ್ ಸ್ಟೋಕ್ಸ್ ತಪ್ಪಿಸಿಕೊಂಡಿದ್ದರು. ಆದರೆ ಬಳಿಕ ಐಪಿಎಲ್‌ನಲ್ಲಿ ಸ್ಟೋಕ್ಸ್ ಲಭ್ಯತೆಯ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಇತ್ತೀಚೆಗೆ ಆರ್‌ಆರ್ ಕೋಚ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು "ಈ ಸಂದರ್ಭದಲ್ಲಿ ಸ್ಟೋಕ್ಸ್‌ಗೆ ಅವಶ್ಯಕವಿರುವ ಸಮಯವನ್ನು ನೀಡಲಾಗುತ್ತದೆ. ಇದು ಅವರಿಗೆ ಕಠಿಣವಾಗಿರುವ ಸಂದರ್ಭ" ಎಂದಷ್ಟೇ ಹೇಳಿದ್ದರು.
ಆದರೆ ಇಂದು ಇನ್ಸ್ಟಾಗ್ರಾಮ್‌ನಲ್ಲಿ ಬೆನ್ ಸ್ಟೋಕ್ಸ್ ಕ್ರೈಸ್ಟ್ ಚರ್ಚ್‌ನಲ್ಲಿ ಬೌಲಿಂಗ್ ಅಭ್ಯಾಸವನ್ನು ನಡೆಸುತ್ತಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ ಹಿನ್ನೆಲೆಯಲ್ಲೇ ಬೆನ್ ಸ್ಟೋಕ್ಸ್ ಈ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಮಭವಾಗಿದ್ದರೂ ಬೆನ್ ಸ್ಟೋಕ್ಸ್ ಇನ್ನೂ ನ್ಯೂಜಿಲೆಂಡ್‌ನಲ್ಲೇ ಇದ್ದಾರೆ. ಒಂದು ವೇಳೆ ಈ ಬಾರಿಯ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಅವರು ಮಾಡಿದರೂ ದುಬೈನಲ್ಲಿ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಹೀಗಾಗಿ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಕೆಲ ಪಂದ್ಯಗಳಿಗಾದರೂ ಸ್ಟೋಕ್ಸ್ ಅಲಭ್ಯರಾಗುವುದು ಖಚಿತವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications