ಸನ್‌ರೈಸರ್ಸ್ ವಿರುದ್ಧದ ಪಂದ್ಯ ಗೆಲ್ಲಲು ಸಿಎಸ್‌ಕೆಗೆ ಸಲಹೆ ನೀಡಿದ ಬ್ರಾಡ್ ಹಾಗ್

ಚೆನ್ನೈ ಸೂಪರ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಹಾಳಿ ಚಾಂಪಿಯನ್ ಮುಂಬೈ ವಿರುದ್ಧ ಭರ್ಜರಿ ಜಯದ ಹೊರತಾಗಿಯೂ ಟೂರ್ನಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡುತ್ತಾ ಬಂದಿದೆ. ಆಡಿರುವ 7 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಮುಂದಿನ ಹಂತಕ್ಕೇರಬೇಕಾದರೆ ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದ ಗೆಲುವು ಬಹಳಷ್ಟು ಮಹತ್ವ ಪಡೆದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಪ್ರಮುಖ ಸಲಹೆಯೊಂದನ್ನು ನೀಡಿದ್ದಾರೆ. ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಬೇಕೆಂದು ಹಾಗ್ ಬಯಸಿದ್ದಾರೆ.
ಬ್ರಾಡ್ ಹಾಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡಿಕೊಳ್ಳಬೇಕೆಂದು ಹೇಳಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿರುವ ಸ್ಯಾಮ್ ಕರ್ರ್ ಅವರನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕೆಂದು ಹಾಗ್ ತಿಳಿಸಿದ್ದಾರೆ. ಸ್ಯಾಮ್ ಕರ್ರನ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಅವರನ್ನು ಅಂಬಾಟಿ ರಾಯುಡು ಕಣಕ್ಕೆ ಇಳಿಯುತ್ತಿರುವ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಬೇಕೆಂದು ರೈನಾ ತಿಳಿಸಿದ್ದಾರೆ.
ಬ್ರಾಡ್ ಹಾಗ್ ಸಿಎಸ್‌ಕೆ ತಂಡದಲ್ಲಿ ಇನ್ನೊಂದು ಬದಲಾವಣೆಯನ್ನು ತಿಳಿಸಿದ್ದಾರೆ. "ವೆಸ್ಟ್ ಇಂಡೀಸ್‌ನ ಸ್ಟಾರ್ ಆಲ್‌ರೌಂಡರ್ ಡ್ವೇಯ್ನ್ ಬ್ರಾವೋ ಅವರನ್ನು ಆಡುವ ಬಳಗದಿಂದ ಹೊರಗಿಟ್ಟು ಅಲ್ಲಿ ಲೆಗ್ ಸ್ಪಿನ್ನರ್ ಇಮ್ರಾನ್ ತಾಹೀರ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಬೇಕು' ಎಂದು ಹೇಳಿದ್ದಾರೆ.
ಇಮ್ರಾನ್ ತಾಹಿರ್ ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. ಆದರೆ ಈ ಬಾರಿಯ ಟೂರ್ನಿಯಲ್ಲಿ ಈವರೆಗೆ ಒಂದು ಪಂದ್ಯದಲ್ಲೂ ಕಣಕ್ಕಿಳಿದಿಲ್ಲ. ಯುಎಇನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಸಿಎಸ್‌ಕೆ ಈ ಅನುಭವಿ ಆಲ್‌ರೌಂಡರ್‌ನನ್ನು ಆಡಿಸಬೇಕೆಂದು ಬ್ರಾಡ್ ಹಾಗ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications