ಐಪಿಎಲ್ 2020: ಚೆನ್ನೈ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ನಡೆದ ಪಂದ್ಯದಲ್ಲಿ ಮುಂಬೈ ಭರ್ಜರಿಯಾಗಿ 10 ವಿಕೆಟ್‌ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ. ಈ ಮೂಲಕ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಅನುಭವಿಸಿದ ಸೋಲಿಗೆ ಮುಂಬೈ ಸರಿಯಾಗಿಯೇ ಪ್ರತಿಕಾರ ತೀರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ತಂಡ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಬೇಗನೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಮುಂಬೈ ಇಂಡಿಯನ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಚೆನ್ನೈ ದಾಂಡಿಗರ ಪಡೆ 114 ರನ್ ಗಳಿಸಲಷ್ಟೇ ಶಕ್ತವಾಯಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ನೀಡಿತ್ತು.
ಮುಂಬೈ ಇಂಡಿಯನ್ಸ್ ಪರವಾಗಿ ಟ್ರೆಂಟ್ ಬೋಲ್ಟ್ 4 ವಿಕೆಟ್ ಪಡೆದು ಚೆನ್ನೈ ದಾಂಡಿಗರನ್ನು ಸೊಲ್ಲೆತ್ತದಂತೆ ಮಾಡಿದರು. ಬೂಮ್ರಾ ಕೂಡ ಉತ್ತಮ ದಾಳಿ ಸಂಘಟಿಸಿ 2 ವಿಕೆಟ್ ಪಡೆದರು. ಸ್ಪಿನ್ನರ್ ದೀಪಕ್ ಚಾಹರ್ ಸಹ ತನ್ನ ಖಾತೆಗೆ ಎರಡು ವಿಕೆಟ್ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು.
ಇನ್ನು ಚೆನ್ನೈ ನೀಡಿದ 115 ರನ್‌ಗಳ ಗುರಿಯನ್ನು ಮುಂಬೈ ಇಂಡಿಯನ್ಸ್ ಸುಲಭವಾಗಿ ಬೆನ್ನತ್ತಿತು. ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ ಹಾಗೂ ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್‌ಗೆ ಯಾವುದೇ ನಷ್ಟವಾಗದಂತೆ ನೋಡಿಕೊಂಡು ಈ ಗುರಿಯನ್ನು ಸುಲಭವಾಗಿ ತಲುಪುವಂತೆ ಮಾಡಿದರು. ಮುಂಬೈ ಇಂಡಿಯನ್ಸ್ ಯಾವುದೇ ವಿಕೆಟ್ ಕಳೆದುಕೊಳ್ಳದೆ 12.2 ಓವರ್‌ಗಳಲ್ಲಿ ಈ ಗುರಿಯನ್ನು ತಲುಪಿತು.
ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್ ಕಿಶನ್ 37 ಎಸೆತಗಳನ್ನು ಎದುರಿಸಿ 68 ರನ್ ಗಳಿಸಿದರೆ ಕ್ವಿಂಟನ್ ಡಿಕಾಕ್ 37 ಎಸೆತಗಳಲ್ಲಿ 46 ರನ್ ಗಳಿಸಿದರು. ಈ ಮೂಲಕ ಮುಂಬೈ ಆಡಿದ 10 ಪಂದ್ಯಗಳಲ್ಲಿ 7ನೇ ಗೆಲುವನ್ನು ಸಾಧಿಸಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications