Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೋವಿಡ್-19 ಪರೀಕ್ಷೆಗೆ ಒಳಗಾದ ಸಿಎಸ್‌ಕೆ ನಾಯಕ ಎಂಎಸ್ ಧೋನಿ

IPL 2020: CSK captain MS Dhoni undergoes Covid-19 test

ಚೆನ್ನೈ, ಆಗಸ್ಟ್ 13: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಗೊಳ್ಳಲಿದೆ. ಇದಕ್ಕೆ ಕ್ಷಣಗಣನೆ ಆರಂಭವಾಗಿದ್ದು, ತಂಡಗಳು ಸಿದ್ಧತೆ ನಡೆಸಿಕೊಳ್ಳುತ್ತಿವೆ. ಐಪಿಎಲ್ ಸಲುವಾಗಿ ಯುಎಇಗೆ ಹೊರಡುವ ಮುನ್ನ ಎಲ್ಲಾ ಆಟಗಾರರು ಕೊರೊನಾ ಪರೀಕ್ಷೆಗೆ ಒಳಗಾಗಬೇಕಿದೆ.

ಟೀಮ್ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕ ಎಂಎಸ್ ಧೋನಿ ಬುಧವಾರ (ಆಗಸ್ಟ್ 12) ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದಾರೆ. ಅವರ ಪರೀಕ್ಷೆಯ ಫಲಿತಾಂಶ ಗುರುವಾರ (ಆಗಸ್ಟ್ 13) ಬರುವ ನಿರೀಕ್ಷೆಯಿದೆ.

ಕಳೆದ ವರ್ಷ ಐಸಿಸಿ ವಿಶ್ವಕಪ್‌ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ ಸೋತು ಹೊರ ಬಿದ್ದಾಗ ಕಡೇಯ ಬಾರಿ ಎಂಎಸ್ ಧೋನಿ ಕ್ರಿಕೆಟ್‌ ಆಡಿದ್ದು, ಅದಾಗಿ ಧೋನಿ ಯಾವುದೇ ಪಂದ್ಯಗಳನ್ನಾಡಿಲ್ಲ. ಹೀಗಾಗಿ ಐಪಿಎಲ್ ಮೂಲಕ ಧೋನಿ ಮೈದಾನಕ್ಕಿಳಿಯುವುದನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಯುಎಇಯಲ್ಲಿ ಸೆಪ್ಟೆಂಬರ್ 19ರಿಂದ ಆರಂಭಗೊಳ್ಳುವ ಐಪಿಎಲ್ ಟೂರ್ನಿಯ ಪಂದ್ಯಗಳು ದುಬೈ, ಅಬುಧಾಬಿ ಮತ್ತು ಶಾರ್ಜಾ ತಾಣಗಳಲ್ಲಿ ನಡೆಯಲಿವೆ. ನವೆಂಬರ್ 10ರಂದು ಫೈನಲ್ ಪಂದ್ಯದೊಂದಿಗೆ ಐಪಿಎಲ್‌ಗೆ ತೆರೆ ಬೀಳಲಿದೆ.

Story first published: Thursday, August 13, 2020, 13:18 [IST]
Other articles published on Aug 13, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+