ಐಪಿಎಲ್ 2020: ಚೆನ್ನೈ vs ಪಂಜಾಬ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಕಾದಾಡಲಿವೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 18ನೇ ಪಂದ್ಯವಿದು.
ಟಾಸ್ ಗೆದ್ದಿರುವ ಕಿಂಗ್ಸ್ ಇಲೆವೆನ್ ಪಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಚೆನ್ನೈ ಈಗಾಗಲೇ ಸೋತಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ಕೂಡ ಹೀಗೇ ಮೂರು ಪಂದ್ಯಗಳನ್ನು ಕಳೆದುಕೊಂಡಿದೆ. ಅಂಕಪಟ್ಟಿಯಲ್ಲಿ ಪಂಜಾಬ್ 7ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸದ್ಯ 8ನೇ ಸ್ಥಾನದಲ್ಲಿದೆ.
ಪಂಜಾಬ್ ಪ್ಲೇಯಿಂಗ್ XI: ಕೆ.ಎಲ್. ರಾಹುಲ್ (ವಿಕೆ/ಸಿ), ಮಾಯಾಂಕ್ ಅಗರ್ವಾಲ್, ಮಂದೀಪ್ ಸಿಂಗ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಕ್ರಿಸ್ ಜೋರ್ಡಾನ್, ಹರ್ಪ್ರೀತ್ ಬ್ರಾರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್.
ಚೆನ್ನೈ ಪ್ಲೇಯಿಂಗ್ XI: ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಎಂ.ಎಸ್.ಧೋನಿ (ವಿಕೆ/ಸಿ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications