ಐಪಿಎಲ್ 2020: ಚೆನ್ನೈ vs ಹೈದರಾಬಾದ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2020 (ಐಪಿಎಲ್) ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಐಪಿಎಲ್ 14ನೇ ಪಂದ್ಯದಲ್ಲಿ ಕಾದಾಡಲಿವೆ. ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ 7.30 pmಗೆ ಆರಂಭವಾಗಲಿದೆ.
ಟಾಸ್ ಗೆದ್ದಿರುವ ಹೈದರಾಬಾದ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಸೀಸನ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಎರಡೂ ತಂಡಗಳೂ ಎರಡು ಪಂದ್ಯಗಳನ್ನು ಸೋತು ಒಂದು ಪಂದ್ಯವನ್ನಷ್ಟೇ ಗೆದ್ದಿದೆ. ಎರಡೂ ತಂಡಗಳ ಖಾತೆಯಲ್ಲೂ ತಲಾ 2 ಅಂಕಗಳಿವೆ.
ಸಿಎಸ್‌ಕೆ ಪ್ಲೇಯಿಂಗ್ XI: ಶೇನ್ ವಾಟ್ಸನ್, ಅಂಬಾಟಿ ರಾಯುಡು, ಫಾಫ್ ಡು ಪ್ಲೆಸಿಸ್, ಕೇದಾರ್ ಜಾಧವ್, ಎಂ.ಎಸ್. ಧೋನಿ (ವಿಕೆ/ಸಿ), ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಪಿಯೂಷ್ ಚಾವ್ಲಾ, ದೀಪಕ್ ಚಹಾರ್.
ಎಸ್‌ಆರ್‌ಎಚ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಪ್ರಿಯಮ್ ಗರ್ಗ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕೆ ಖಲೀಲ್ ಅಹ್ಮದ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications