ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್‌ಗೆ ಸನ್‌ರೈಸರ್ಸ್ ಹೈದರಾಬಾದ್ ಸವಾಲು

ಐಪಿಎಲ್‌ನಲ್ಲಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲಿನಿಂದ ಕಂಗೆಟ್ಟಿದ್ದು ಗೆಲುವಿನ ಲಯಕ್ಕೆ ಮರಳಲು ಹವಣಿಸುತ್ತಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ಕೂಡ ಗೆಲುವಿಗಿಂತ ಸೋಲಿನ ರುಚಿಯನ್ನೇ ಹೆಚ್ಚಾಗಿ ಕಂಡಿದೆ.
ಇದು ಸನ್‌ರೈಸರ್ಸ್ ಹೈದರಾವಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈ ಟೂರ್ನಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿರುವ ಪಂದ್ಯವಾಗಿದೆ. ಅಕ್ಟೋಬರ್ 2ರಂದು ಈ ತಂಡಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿತ್ತು. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 7 ರನ್‌ಗಳ ಗೆಲುವನ್ನು ಆಚರಿಸಿತ್ತು.
ಎರಡು ತಂಡಗಳು ಕೂಡ ಕಳೆದ ಸೋಲನ್ನು ಅನುಭವಿಸಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಗೆದ್ದ ಬಳಿಕ ಚೆನ್ನೈ ಗೆಲುವಿನ ಲಯಕ್ಕೆ ಮರಳಿದ ಭರವಸೆ ನೀಡಿತ್ತು ಆದರೆ ನಂತರ ಕೆಕೆಆರ್ ಹಾಗೂ ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಸೋಲು ಕಂಡಿತ್ತು. ಮತ್ತೊಂದೆಡೆ ಸನ್‌ರೈಸರ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಸೋಲು ಕಂಡಿತ್ತು.
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ
ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಪ್ರಿಯಮ್ ಗರ್ಗ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಟಿ ನಟರಾಜನ್, ಖಲೀಲ್ ಅಹ್ಮದ್ ಮತ್ತು ಸಂದೀಪ್ ಶರ್ಮಾ / ಬೆಸಿಲ್ ಥಾಂಪಿ
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ
ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎಂ.ಎಸ್. ಧೋನಿ (ನಾಯಕ& ವಿಕೆಟ್ ಕೀಪರ್), ಎನ್ ಜಗದೀಶನ್, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಕರ್ಣ್ ಶರ್ಮಾ / ಪಿಯೂಷ್ ಚಾವ್ಲಾ, ದೀಪಕ್ ಚಹರ್ ಮತ್ತು ಶಾರ್ದುಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications