ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಭುಜಕ್ಕೆ ಪೆಟ್ಟು: ಫೀಲ್ಡ್‌ನಿಂದ ಹೊರಕ್ಕೆ

ಐಪಿಎಲ್ 13ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತೆ ಕಾಣುತ್ತಿದೆ. ಐಪಿಎಲ್ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಫೀಲ್ಡಿಂಗ್ ಮಾಡುವಾಗ ಭುಜಕ್ಕೆ ಪೆಟ್ಟಾದ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಫೀಲ್ಡ್‌ನಿಂದ ಹೊರನಡೆದಿದ್ದಾರೆ.
ಎರಡನೇ ಇನ್ನಿಂಗ್ಸ್‌ನ ಐದನೇ ಓವರ್‌ನ ಕೊನೆಯ ಎಸೆತದಲ್ಲಿ ಬೆನ್ ಸ್ಟೋಕ್ಸ್ ಮಿಡ್ ಆಫ್ ನತ್ತ ಬೌಂಡರಿ ಕಳುಹಿಸುವ ಪ್ರಯತ್ನಿಸಿದ್ರು. ಈ ವೇಳೆ ನಾಯಕ ಶ್ರೇಯಸ್ ಅಯ್ಯರ್ ಬಾಲ್ ತಡೆಯಲು ಹೋಗಿ ಡೈ ಹೊಡೆತ ಪರಿಣಾಮ ಬೌಂಡರಿ ಉಳಿಸಿದರು , ಆದರೆ ತನ್ನ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ಆತನಿಗೆ ಆಗಿರುವ ಗಾಯಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹೊರಬೀಳಬೇಕಾಗಿದ್ದು, ಫೀಲ್ಡ್‌ನಿಂದ ಮಾತ್ರ ಹೊರನಡೆದರು.
ಒಂದು ವೇಳೆ ಗಾಯ ದೊಡ್ಡ ಮಟ್ಟಿಗೆ ಆಗಿ ಶ್ರೇಯಸ್ ಕೆಲ ಕಾಲ ವಿಶ್ರಾಂತಿ ಪಡೆಯಬೇಕಾಗಿ ಬಂದಿದ್ದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಭಾರೀ ಹೊಡೆತ ಬೀಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿತ್ತು. ಇದರಲ್ಲಿ ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಅರ್ಧಶತಕ ಕೂಡ ಸಿಡಿಸಿದ್ರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications