ಐಪಿಎಲ್ 2020: ಡೆಲ್ಲಿ vs ಚೆನ್ನೈ, ಟಾಸ್ ವರದಿ ಅಂತಿಮ ತಂಡಗಳು

ಐಪಿಎಲ್‌ನಲ್ಲಿ ಇಂದು ಏಳನೇ ಪಂದ್ಯ ಆರಂಭವಾಗಿದ್ದು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಯುವ ಆಟಗಾರ ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎದುರಾಳಿಯಾಗಿದೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.
ಯುವ ಆಟಗಾರರು ತುಂಬಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೆಚ್ಚಾಗಿ ಅನುಭವಿ ಆಟಗಾರರನ್ನೇ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಹೇಗೆ ಎದುರಿಸಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಯಾವ ತಂಡ ಮೇಲುಗೈ ಸಾಧಿಸಿ ಅಂಕಪಟ್ಟಿಯಲ್ಲಿ ಮುನ್ನಡೆಯನ್ನು ಪಡೆಯಬಹುದು ಎಂಬುದು ಕೂಡ ಇಲ್ಲಿ ಮುಖ್ಯವಾಗಿದೆ.
ಪಂದ್ಯದಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಸೋಲಬಹುದಾಗಿದ್ದ ಪಂದ್ಯವನ್ನು ಡೆಲ್ಲಿ ಟೈ ಮಾಡಿಕೊಂಡು ಬಳಿಕ ಸೂಪರ್ ಓವರ್‌ನಲ್ಲಿ ಗೆದ್ದಿತ್ತು. ಚೆನ್ನೈ ತಂಡಕ್ಕೆ ಇದು ಮೂರನೇ ಪಂದ್ಯವಾಗಿದ್ದು ಮೊದಲ ಎರಡು ಪಂದ್ಯಗಳಲ್ಲಿ ಸೋಲು ಹಾಗೂ ಗೆಲುವಿನ ರುಚಿ ಕಂಡಿದೆ.
ಡಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶಿಮ್ರಾನ್ ಹೆಟ್ಮೇಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ಆಕ್ಸರ್ ಪಟೇಲ್, ಕಗಿಸೊ ರಬಡಾ, ಅಮಿತ್ ಮಿಶ್ರಾ, ಅನ್ರಿಚ್ ನಾರ್ಟ್ಜೆ, ಅವೇಶ್ ಖಾನ್
ಚೆನ್ನೈ ಸೂಪರ್ ಕಿಂಗ್ಸ್ ಮುರಳಿ ವಿಜಯ್, ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಕೇದಾರ್ ಜಾಧವ್, ಎಂ.ಎಸ್.ಧೋನಿ (ನಾಯಕ / ವಿಕೆಟ್ ಕೀಪರ್), ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಜೋಶ್ ಹ್ಯಾಜಲ್‌ವುಡ್, ದೀಪಕ್ ಚಹರ್, ಪಿಯೂಷ್ ಚಾವ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications