For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ಹೆಡ್ ಟು ಹೆಡ್ ಮಾಹಿತಿ

IPL 2020, DC vs KKR Head-to-head records and Players to watch out for

ಐಪಿಎಲ್‌ನ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ. ಈ ಬಾರಿಯ ಐಪಿಎಲ್‌ನಲ್ಲಿ ಈ ಎರಡು ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಎರ೨೮ ಪಂದ್ಯಗಳನ್ನು ಗೆದ್ದಿದ್ದು ಒಂದೊಂದರಲ್ಲಿ ಸೋಲು ಕಂಡಿದೆ. ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಕಳೆದ 12 ಆವೃತ್ತಿಗಳಲ್ಲಿ ಈ ಎರಡು ತಂಡಗಳ ಮುಖಾಮುಖಿಯಲ್ಲಿ ಕೆಕೆಆರ್ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 23 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 13 ಪಂದ್ಯಗಳಲ್ಲಿ ಗೆದ್ದಿರುವ ಕೆಕೆಆರ್ ಮುನ್ನಡೆಯಲ್ಲಿದ್ದರೆ ಡೆಲ್ಲಿ ಕ್ಯಾಪಿಟಲ್ಸ್ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ.

ಆದರೆ ಕಳೆದ ಆವೃತ್ತಿಯಲ್ಲಿ ನಡೆದ ಎರಡು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಎರಡು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನೂ ಗೆದ್ದುಕೊಳ್ಳುವಲ್ಲಿ ಡೆಲ್ಲಿ ಯಶಸ್ವಿಯಾಗಿದೆ. ಇದರಲ್ಲಿ ಮೊದಲ ಹಣಾಹಣ ಸಾಕಷ್ಟು ಪೈಪೋಟಿಯಿಂದ ಕೂಡಿತ್ತು. ಟೈ ಫಲಿತಾಂಶ ಕಂಡ ಈ ಪಂದ್ಯದಲ್ಲಿ ಡೆಲ್ಲಿ ಸೂಪರ್ ಓವರ್‌ನಲ್ಲಿ ಗೆಲುವು ಕಂಡಿತ್ತು.

ಇನ್ನು ಕಳೆದ ಆವೃತ್ತಿಯ ಎರಡನೇ ಪಂದ್ಯ ಕೊಲ್ಕತ್ತಾದಲ್ಲಿ ನಡೆದಿತ್ತು. ಇದರಲ್ಲಿ ಶಿಖರ್ ಧವನ್ ಬಾರಿಸಿದ ಅಜೇಯ 97 ರನ್‌ಗಳ ಸಾಹಸದಿಂದ 7 ವಿಕೆಟ್‌ಗಳ ಗೆಲುವನ್ನು ಪಡೆದುಕೊಳ್ಳುವಲ್ಲ್ಇ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಗಿತ್ತು. ಈ ಮೂಲಕ ಎರಡು ತಂಡಗಳ ನಡುವಿನ ಸೋಲು ಗೆಲುವಿನ ಅಂತರ ಕಡಿಮೆಯಾಗಿತ್ತು.

ಎರಡು ತಂಡಗಳ ಮುಖಾಮುಖಿಯ ಸಂದರ್ಭದಲ್ಲಿ ವೆಸ್ಟ್ ಇಂಡೀಸ್ ತಂಡದ ಸ್ಪಿನ್ನರ್ ಸುನಿಲ್ ನರೈನ್ ಉತ್ತಮ ಬೌಲಿಂಗ್ ಸಾಧನೆ ಮಾಡಿದ್ದಾರೆ. 17 ಪಂದ್ಯಗಳನ್ನಾಡಿರುವ ನರೈನ್ 6.48ರ ಎಕಾನಮಿಯಲ್ಲಿ 17 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲಿ ಡೆಲ್ಲಿ ತಂಡದ ಯುವ ಆಟಗಾರ ಪೃಥ್ವಿ ಶಾ ಗಮನಾರ್ಹ ಪ್ರದರ್ಶನ ನೀಡಿದ್ದು ಮೂರು ಪಂದ್ಯಗಳಲ್ಲಿ ಎರಡು ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.

Story first published: Tuesday, October 6, 2020, 16:43 [IST]
Other articles published on Oct 6, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+