ಐಪಿಎಲ್ 2020: ಶಾರ್ಜಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಐಪಿಎಲ್‌ನಲ್ಲಿ ಇಂದು ಎರಡು ಪಂದ್ಯಗಳ ನಡೆಯಲಿದೆ. ಇಂದಿನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಎರಡು ಪಂದ್ಯಗಳನ್ನು ಗೆದ್ದು ಬೀಗಿದ್ದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದರೂ ಬಳಿಕ ನಡೆದ ಎರಡು ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿತ್ತು.
ಹೀಗಾಗಿ ಎರಡೂ ತಂಡಗಳು ಆಡಿದ ಮೂರು ಪಂದ್ಯಗಳಲ್ಲಿ ತಲಾ 2 ಪಂದ್ಯಗಳನ್ನು ಗೆದ್ದಿದ್ದು 1 ಸೋಲು ಕಂಡಿದೆ. ನೆಟ್‌ರನ್ ರೇಟ್‌ನಲ್ಲಿ ಮುಂದಿರುವ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದ್ದು ಕೆಕೆಆರ್ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳುವ ಇರಾದೆಯಲ್ಲಿ ಎರಡೂ ತಂಡಗಳಿವೆ.
ಈ ಪಂದ್ಯ ಶಾರ್ಜಾದಲ್ಲಿ ನಡೆಯಲಿರುವ ಕಾರಣ ರನ್ ಹೊಳೆ ಹರಿಯುವ ಸಾಧ್ಯತೆಯಿದೆ. ಕಡಿಮೆ ಅಂತರದಲ್ಲಿರುವ ಬೌಂಡರಿ ಲೈನ್ ಲಾಭವನ್ನು ಬ್ಯಾಟ್ಸ್‌ಮನ್‌ಗಳು ಪಡೆಯುವುದು ನಿಶ್ಚಿತ. ಆದರೆ ಆರಂಭದಲ್ಲಿ ಬೌಲರ್‌ಗಳಿಗೆ ಅವಕಾಶ ದೊರೆಯುವ ಸಾಧ್ಯತೆಯೂ ಇದೆ. ಟಾಸ್ ಗೆದ್ದ ತಂಡ ರನ್ ಬೆನ್ನಟ್ಟುವ ಸಾಧ್ಯತೆಯಿದೆ. ಆದರೆ ಟಾಸ್ ಅಷ್ಟೇನೂ ನಿರ್ಣಾಯಕವಾಗಲಾರದು ಎಂಬುದು ಗಮನಾರ್ಹ
ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಪೃಥ್ವಿ ಶಾ, ಶಿಮ್ರಾನ್ ಹೆಟ್ಮೇರ್, ಆಕ್ಸರ್ ಪಟೇಲ್, ಮಾರ್ಕಸ್ ಸ್ಟೊಯಿನಿಸ್, ಕೀಮೋ ಪಾಲ್, ಕಗಿಸೊ ರಬಡಾ
ಕೋಲ್ಕತಾ ನೈಟ್ ರೈಡರ್ಸ್: ಶುಬ್ಮನ್ ಗಿಲ್, ಸುನಿಲ್ ನರೈನ್, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ನಾಯಕ & ವಿಕೆಟ್ ಕೀಪರ್), ಇಯೊನ್ ಮೋರ್ಗಾನ್, ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಶಿವಂ ಮಾವಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಕಮಲೇಶ್ ನಾಗರಕೋಟಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications