ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 51ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಮುಂಬೈ ಈಗಾಗಲೇ ಪ್ಲೇ ಆಫ್ಗೆ ಅರ್ಹತೆ ಗಿಟ್ಟಿಸಿಕೊಂಡಾಗಿದೆ ಹೀಗಾಗಿ ಡೆಲ್ಲಿಗೆ ಇಂದಿನ ಗೆಲುವು ಪ್ರಮುಖವೆನಿಸಿದೆ. ಟಾಸ್ ಗೆದ್ದಿರುವ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.
ಜೋಫ್ರಾ ಹೇಳಿದಂತೆಯೇ ನಡೆಯುತ್ತಾ?: ಆರ್ಚರ್ ಹಳೆ ಟ್ವೀಟೊಂದು ವೈರಲ್!
ಮುಂಬೈ ಇಂಡಿಯನ್ಸ್ ಆಡಿರುವ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಡೆಲ್ಲಿ 14ರಲ್ಲಿ 7 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಟೂರ್ನಿ ಆರಂಭದಲ್ಲಿ ಬಹುತೇಕ ಎಲ್ಲಾ ಪಂದ್ಯಗಳನ್ನು ಗೆಲ್ಲುತ್ತಾ ಸಾಗಿದ್ದ ಡೆಲ್ಲಿ ಹಿಂದಿನ ಮೂರು ಪಂದ್ಯಗಳನ್ನು ಸೋತಿತ್ತು. ಹೀಗಾಗಿ ಇಂದಿನ ಗೆಲುವಿನತ್ತ ಶ್ರೇಯಸ್ ಐಯ್ಯರ್ ಪಡೆ ಕಣ್ಣಿಟ್ಟಿದೆ.
ಮುಂಬೈ ಇಂಡಿಯನ್ಸ್ ತಂಡ: ಕ್ವಿಂಟನ್ ಡಿ ಕಾಕ್ (ವಿಕೆ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್ (ಸಿ), ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹಾರ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋನಿಸ್, ಹರ್ಷಲ್ ಪಟೇಲ್, ಕಾಗಿಸೊ ರಬಡಾ, ರವಿಚಂದ್ರನ್ ಅಶ್ವಿನ್, ಪ್ರವೀಣ್ ದೂಬೆ, ಅನ್ರಿಕ್ ನಾರ್ಟ್ಜೆ.