For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಸೋಲಿನ ಗಾಯದ ಮೇಲೆ ಶ್ರೇಯಸ್ ಅಯ್ಯರ್‌ಗೆ ದಂಡದ ಬರೆ

Ipl 2020: Dc Vs Srh: Dc Captain Shreyas Iyer Fined Rs 12 Lakh For Maintaining Slow Over-rate

ಟೂರ್ನಿಯಲ್ಲಿ ಅದ್ಭುತ ಪ್ರದರ್ಶನವನ್ನು ನೀಡುತ್ತಾ ಮಿಂಚುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸನ್‌ರೈಸರ್ಸ್ ಹೈದರಾಬಾದ್ ಸೋಲಿನ ರುಚಿಯನ್ನು ತೋರಿಸಿದೆ. ಈ ಮೂಲಕ ಮೂರು ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಸೋಲನ್ನು ಅನುಭವಿಸಿದೆ. ಈ ಸೋಲಿನ ಬೆನ್ನಿಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕನಿಗೆ ದಂಡದ ಬರೆಯೂ ಬಿದ್ದಿದೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ ನಿಧಾನಗತಿಯ ಬೌಲಿಂಗ್ ಮಾಡಿದೆ. ನಿಗದಿತ ಸಮಯಕ್ಕಿಂತ ಹೆಚ್ಚುವರಿ ಸಮಯವನ್ನು ತೆಗೆದುಕೊಂಡಿದ್ದು ಈ ಕಾರಣದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ 12 ಲಕ್ಷ ರೂಪಾಯಿಗಳ ದಂಡಕ್ಕೆ ಗುರಿಯಾಗಿದ್ದಾರೆ.

ಈ ಬಗ್ಗೆ ಐಪಿಎಲ್ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ. "ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ನಿಧಾನಗತಿಯ ಓವರ್‌ಗಳ ಅಪರಾಧಕ್ಕೆ ಒಳಗಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರಿಗೆ 12 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ" ಎಂದು ಈ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನು ಟೂರ್ನಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಅಜೇಯವಾಗಿದ್ದ ಡೆಲ್ಲಿ ತಂಡ ಮೊದಲ ಸೋಲನ್ನು ಕಂಡಿದೆ. ಹೀಗಾಗಿ ಅಂಕಪಟ್ಟಿ ಹಿನ್ನಡೆಕಂಡಿದ್ದು 2ನೇ ಸ್ಥಾನಕ್ಕೆ ಇಳಿದಿದೆ. ರನ್‌ರೇಟ್‌ ಆಧಾರದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ಈ ಬಾರಿಯ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಗಳಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲ ಜಯವನ್ನು ದಾಖಲಿಸಿದೆ. ಈ ಮೂಲಕ ಸತತ ಸೋಲಿನ ಸುಳಿಯಿಂದ ಹೈದರಾಬಾದ್ ಹೊರಬಂದಿದ್ದು ಅಂಕಪಟ್ಟಿಯಲ್ಲೂ ಕೊನೆಯ ಸ್ಥಾನದ ಅವಮಾನದಿಂದ ಸದ್ಯಕ್ಕೆ ಪಾರಾಗಿದೆ.

Story first published: Tuesday, October 6, 2020, 15:02 [IST]
Other articles published on Oct 6, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+