ಐಪಿಎಲ್ 2020: ಡೆಲ್ಲಿ ವಿರುದ್ಧ ಅಬ್ಬರಿಸಿದ ಹೈದರಾಬಾದ್‌ಗೆ 88 ರನ್‌ಗಳ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿಯಾಗಿ ಗೆಲುವು ಕಂಡಿದೆ. ಬೃಹತ್ ಮೊತ್ತವನ್ನು ದಾಖಲಿಸಿ ಮಿಂಚಿದ್ದ ಹೈದರಾಬಾದ್ ಬೌಲಿಂಗ್‌ನಲ್ಲೂ ಶ್ರೇಷ್ಠ ಪ್ರದರ್ಶನವನ್ನು ನೀಡಿ 88 ರನ್‌ಗಳ ಗೆಲುವನ್ನು ದಾಖಲಿಸಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ ಡೆಲ್ಲಿ ವಿರುದ್ದದ ಈ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನವನ್ನು ತೋರಿದೆ. ಬ್ಯಾಟಿಂಗ್ ಬೌಲಿಂಗ್ ಎಲ್ಲದರಲ್ಲೂ ಮೇಲುಗೈ ಸಾಧಿಸಿದ ಹೈದರಾಬಾದ್ ತಂಡ ಡೆಲ್ಲಿಯನ್ನು ಯಾವ ಹಂತದಲ್ಲೂ ತಿರುಗಿ ಬೀಳದಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಹೈದರಾಬಾದ್ ಸ್ಪೋಟಕ ಆರಂಭ

ಹೈದರಾಬಾದ್ ಸ್ಪೋಟಕ ಆರಂಭ

ಮೊದಲಿಗೆ ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡದ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಡೇವಿಡ್ ವಾರ್ನರ್ ಹಾಗೂ ವೃದ್ಧಿಮಾನ್ ಸಾಹ ಸ್ಪೋಟಕ ಆರಂಭವನ್ನು ನೀಡಿದರು. 9.4 ಓವರ್‌ಗಳ ಕಾಲ ಬ್ಯಾಟಿಂಗ್ ಮಾಡಿದ ಈ ಜೋಡಿ ಮೊದಲ ವಿಕೆಟ್‌ಗೆ 107 ರನ್‌ಗಳ ಜೊತೆಯಾಟವನ್ನು ನೀಡಿತು.

ವಾರ್ನರ್-ಸಾಹ ಭರ್ಜರಿ ಜೊತೆಯಾಟ

ವಾರ್ನರ್-ಸಾಹ ಭರ್ಜರಿ ಜೊತೆಯಾಟ

ಡೇವಿಡ್ ವಾರ್ನರ್ 66 ರನ್ ಗಳಿಸಿದರೆ ವೃದ್ಧಿಮಾನ್ ಸಾಹ 87 ರನ್‌ಗಳನ್ನು ಸಿಡಿಸಿ ವಿಕೆಟ್ ಒಪ್ಪಿಸಿದರು. ಮನೀಶ್ ಪಾಂಡೆ 44 ರನ್‌ಗಳ ಕಾಣಿಕೆಯನ್ನು ನೀಡಿದರು. ಅಂತಿಮವಾಗಿ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 219 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಯಿತು ಹೈದರಾಬಾದ್.

131 ರನ್‌ಗಳಿಗೆ ಆಟ ಮುಗಿಸಿದ ಡೆಲ್ಲಿ

131 ರನ್‌ಗಳಿಗೆ ಆಟ ಮುಗಿಸಿದ ಡೆಲ್ಲಿ

ಈ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಿಂದಲೇ ಕುಸಿತ ಕಾಣಲು ಆರಂಭಿಸಿತು. ಶಿಖರ್ ಧವನ್, ಸ್ಟೋಯ್ನಿಸ್, ಹೇಟ್ಮೇರ್, ರಹಾನೆ, ಶ್ರೇಯಸ್ ಅಯ್ಯರ್ ಒಬ್ಬರ ಹಿಂದೊಬ್ಬರಂತೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು. ಅಂತಿಮವಾಗಿ ಡೆಲ್ಲಿ 19 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 131 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 88 ರನ್‌ಗಳ ಅಂತರದ ಹೀನಾಯ ಸೋಲು ಕಂಡಿತು.

ಬೌಲಿಂಗ್‌ನಲ್ಲಿ ರಶೀದ್ ಖಾನ್ ಮಿಂಚು

ಬೌಲಿಂಗ್‌ನಲ್ಲಿ ರಶೀದ್ ಖಾನ್ ಮಿಂಚು

ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್‌ನಲ್ಲಿ ರಶೀದ್ ಖಾನ್ ಭರ್ಜರಿ ಪ್ರದರ್ಶನವನ್ನು ನೀಡಿದರು. ನಾಲ್ಕು ಓವರ್‌ಗಳಲ್ಲಿ ಕೇವಲ 7 ರನ್ ನೀಡಿದ ರಶೀದ್ ಖಾನ್ 3 ವಿಕೆಟ್ ಪಡೆದರು. ಉಳಿದಂತೆ ಸಂದೀಪ್ ಶರ್ಮಾ ಹಾಗೂ ಟಿ ನಟರಾಜನ್ ತಲಾ 2 ವಿಕೆಟ್ ಕಿತ್ತರೆ ಶಹ್ಬಾಸ್ ನದೀಮ್, ಜೇಸನ್ ಹೋಲ್ಡರ್ ಹಾಗೂ ವಿಜಯ್ ಶಂಕರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Tuesday, October 27, 2020, 23:09 [IST]
Other articles published on Oct 27, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X