ಐಪಿಎಲ್ 2020: ಡೆಲ್ಲಿ vs ಹೈದರಾಬಾದ್, ಟಾಸ್ ಹಾಗೂ ಪ್ಲೇಯಿಂಗ್ 11

ಐಪಿಎಲ್‌ನ 47ನೇ ಪಂದ್ಯದಲ್ಲಿ ಇಂದು ಡೆಲ್ಲಿ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಮಹತ್ವದ ಘಟ್ಟಕ್ಕೆ ತಲುಪಿರುವ ಟೂರ್ನಿಯಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯವನ್ನು ಗೆದ್ದು ಪ್ಲೇ ಆಫ್ ಹಂತಕ್ಕೇರಲು ಪೈಪೋಟಿಗೆ ಇಳಿಯಲು ಹೈದರಾಬಾದ್ ತಂಡ ಕೂಡ ಸಜ್ಜಾಗಿದೆ.
ಇಂದಿನ ಪಂದ್ಯದಲ್ಲಿ ಹೈದರಾಬಾದ್ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಬೆರ್ ಸ್ಟೋವ್, ಪ್ರಿಯಮ್ ಗಾರ್ಗ್ ಹಾಗೂ ಖಲೀಲ್ ಇಮದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ. ಬದಲಾಗಿ ವಿಲಿಯಮ್ಸನ್, ಸಾಹ ಹಾಗೂ ನದೀಮ್ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಬದಲಾವಣೆಗೂ ಮುಂದಾಗದೆ ಕಳೆದ ಪಂದ್ಯದ ತಂಡದೊಂದಿಗೇ ಕಣಕ್ಕಿಳಿಯುತ್ತಿದೆ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ವಿಜಯ್ ಶಂಕರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಶಹಬಾಜ್ ನದೀಮ್, ಸಂದೀಪ್ ಶರ್ಮಾ, ಟಿ ನಟರಾಜನ್
ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಅಜಿಂಕ್ಯ ರಹಾನೆ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ, ತುಷಾರ್ ದೇಶಪಾಂಡೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications