Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2020: ಪಾಯಿಂಟ್ಸ್ ಟೇಬಲ್‌ನಲ್ಲಿ ಮತ್ತೆ ಅಗ್ರಪಟ್ಟಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್

IPL 2020: Delhi Capitals Retain Top Spot

ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿದ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 13ನೇ ಆವೃತ್ತಿಯಲ್ಲಿ ಮತ್ತೊಮ್ಮೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿದೆ.

ದುಬೈ ಇಂಟರ್‌ನ್ಯಾಷ್‌ನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 30ನೇ ಪಂದ್ಯದಲ್ಲಿ ಆರ್‌ಆರ್ ವಿರುದ್ಧ ಡೆಲ್ಲಿ 12ರನ್‌ಗಳಿಂದ ಗೆಲುವು ಸಾಧಿಸಿತು. ಟಾಸ್​​ ಗೆದ್ದು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ, ನಿಗದಿತ 20 ಓವರ್​ನಲ್ಲಿ 7 ವಿಕೆಟ್ ಕಳೆದುಕೊಂಡು 161 ರನ್​ಗಳಿಸಿತ್ತು. ಈ ಗುರಿಯನ್ನ ಬೆನ್ನಟ್ಟಿದ್ದ ರಾಜಸ್ಥಾನ್ ರಾಯಲ್ಸ್​ 20 ಓವರ್​​ನಲ್ಲಿ 8 ವಿಕೆಟ್ ಕಳೆದುಕೊಂಡು 148 ರನ್​ಗಳಿಸಿ ಸೋಲನ್ನ ಒಪ್ಪಿಕೊಂಡಿತು.

ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ 8 ಪಂದ್ಯಗಳಲ್ಲಿ 6 ಪಂದ್ಯ ಗೆಲುವು, 2 ಪಂದ್ಯ ಸೋಲಿನೊಂದಿಗೆ ಒಟ್ಟು 12 ಪಾಯಿಂಟ್ಸ್‌ ಕಲೆ ಹಾಕಿ ಮೊದಲ ಸ್ಥಾನಕ್ಕೇರಿದೆ. ಇದರಿಂದಾಗಿ 7 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು 10 ಪಾಯಿಂಟ್ಸ್ ಹೊಂದಿರುವ ಮುಂಬೈ ಇಂಡಿಯನ್ಸ್ ಎರಡನೇ ಸ್ಥಾನಕ್ಕೆ ಜಾರಿದೆ.

ಈ ಮೊದಲು ಅಗ್ರಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತ ಪರಿಣಾಮ ಎರಡನೇ ಸ್ಥಾನಕ್ಕೆ ಇಳಿದಿತ್ತು. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವಿನ ಮೂಲಕ ಶ್ರೇಯಸ್ ಅಯ್ಯರ್ ಟೀಮ್ ಅಗ್ರಪಟ್ಟಕ್ಕೇರಿದೆ.

Story first published: Thursday, October 15, 2020, 10:05 [IST]
Other articles published on Oct 15, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+