ಐಪಿಎಲ್ 2020: ಡೆಲ್ಲಿ ಕ್ಯಾಪಿಟಲ್ಸ್ vs ಕಿಂಗ್ಸ್ XI ಪಂಜಾಬ್‌, ಸಂಭಾವ್ಯ ತಂಡ

ಐಪಿಎಲ್ ಅಂಗಳದಲ್ಲಿ ಇಂದು ಎರಡನೇ ಪಂದ್ಯ ನಡೆಯಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡೂ ತಂಡಗಳು ಟೂರ್ನಿಯ ತಮ್ಮ ಮೊದಲ ಗೆಲುವಿಗಾಗಿ ಕಾದಾಟವನ್ನು ನಡೆಸಲಿದೆ. ಎರಡೂ ತಂಡಗಳು ಕೂಡ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಬಲಿಷ್ಠ ಆಟಗಾರರನ್ನು ಹೊಂದಿದೆ.

ಡೆಲ್ಲಿ ತಂಡ ಯುವ ಹಾಗೂ ಅನುಭವಿ ಆಟಗಾರರನ್ನು ಒಳಗೊಂಡ ಉತ್ತಮ ತಂಡವಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಳೆದ ಬಾರಿ ನೀಡಿದ ಪ್ರದರ್ಶನಕ್ಕಿಂತಲ್ಲೂ ಅದ್ಭಿತ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್. ಇಂದಿನ ಪಂದ್ಯದಲ್ಲಿ ನಾಯಕ ಶ್ರೇಯಸ್ ಅಯ್ಯರ್, ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಾದ ರಿಷಭ್ ಪಂತ್ ಹಾಗೂ ಅಲೆಕ್ಸ್ ಕ್ಯಾರಿ ಪ್ರದರ್ಶನ ಪ್ರಮುಖವಾಗಿರಲಿದೆ.

ಡೆಲ್ಲಿ ಕ್ಯಾಪಿಟಲ್ಸ್ vs ಕಿಂಗ್ಸ್ XI ಪಂಜಾಬ್ : ಎರಡೂ ತಂಡಗಳ ಬಲಾಬಲ: ಸೋಲು ಗೆಲುವಿನ ಲೆಕ್ಕಾಚಾರ!

ಪಂಜಾಬ್ ತಂಡವೂ ಕೂಡ ಯುವ ಹಾಗೂ ಅನುಭವಿ ಆಟಗಾರರನ್ನು ಒಳಗೊಂಡ ತಂಡವಾಗಿದೆ. ಈ ಬಾರಿ ಕೆಎಲ್ ರಾಹುಲ್ ಮುಂದಾಳತ್ವ ವಹಿಸಿಕೊಂಡಿದ್ದಾರೆ. ಕ್ರಿಸ್ ಗೇಲ್, ಮ್ಯಾಕ್ಸ್‌ವೆಲ್ ಮಯಾಂಕ್ ಅಗರ್ವಾಲ್, ಮೊಹಮದ್ ಶಮಿ ಪ್ರದರ್ಶನ ಪಂಜಾಬ್ ಪಾಲಿಗೆ ನಿರ್ಣಾಯಕವಾಗಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್ (ನಾಯಕ), ಅಲೆಕ್ಸ್ ಕ್ಯಾರಿ, ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಕಗಿಸೊ ರಬಡಾ, ಅಮಿತ್ ಮಿಶ್ರಾ, ಸಂದೀಪ್ ಲಮಿಚಾನೆ, ಹರ್ಷಲ್ ಪಟೇಲ್.

ಆರಂಭ ಪಂದ್ಯ ಸೋಲಿನಲ್ಲೂ ದಾಖಲೆ ಬರೆದ ಮುಂಬೈ ಇಂಡಿಯನ್ಸ್

ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭಾವ್ಯ ತಂಡ: ಕ್ರಿಸ್ ಗೇಲ್, ಕೆಎಲ್ ರಾಹುಲ್ (ನಾಯಕ& ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್, ಗ್ಲೆನ್ ಮ್ಯಾಕ್ಸ್ ವೆಲ್, ಮಂದೀಪ್ ಸಿಂಗ್, ಕೆ ಗೌತಮ್, ಮೊಹಮ್ಮದ್ ಶಮಿ, ಮುಜೀಬ್ ಉರ್ ರಹಮಾನ್, ಕ್ರಿಸ್ ಜೋರ್ಡಾನ್, ಇಶಾನ್ ಪೊರೆಲ್.

For Quick Alerts
ALLOW NOTIFICATIONS
For Daily Alerts

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Sunday, September 20, 2020, 16:59 [IST]
Other articles published on Sep 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X