ಐಪಿಎಲ್ 2020: ಡೆಲ್ಲಿ vs ಪಂಜಾಬ್, ಟಾಸ್ ವರದಿ, ಅಂತಿಮ ತಂಡಗಳು

ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಇಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೂರ್ನಿಯ ಎರಡನೇ ಪಂದ್ಯ ಇದಾಗಿದ್ದು ತಮ್ಮ ಮೊದಲ ಪಂದ್ಯವನ್ನು ಗೆದ್ದು ಟೂರ್ನಿಯಲ್ಲಿ ಶುಭಾರಂಭ ಮಾಡಬೇಕು ಎಂಬ ಹುಮ್ಮಸ್ಸಿನಲ್ಲಿ ಎರಡೂ ತಂಡಗಳು ಇವೆ.
ಟಾಸ್ ಗೆದ್ದಿರುವ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪಂಜಾಬ್ ತಂಡದಲ್ಲಿ ಟಿ20 ಕ್ರಿಕೆಟ್‌ನ ಘಟಾನುಘಟಿ ಬ್ಯಾಟ್ಸ್‌ಮನ್‌ಗಳು ಇದ್ದಾರೆ. ಹೀಗಾಗಿ ಎದುರಾಳಿ ನೀಡಿದ ಗುರಿಯನ್ನು ಬೆನ್ನತ್ತುವ ವಿಶ್ವಾಸದಲ್ಲಿ ರಾಹುಲ್ ಮತ್ತು ಬಳಗವಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಮೋಹಿತ್ ಶರ್ಮಾ
ಕಿಂಗ್ಸ್ ಇಲವೆನ್ ಪಂಜಾಬ್ ಆಡುವ ಬಳಗ: ಲೋಕೇಶ್ ರಾಹುಲ್ (ನಾಯಕ), ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ಸರ್ಫರಾಜ್ ಖಾನ್, ಗ್ಲೆನ್ ಮ್ಯಾಕ್ಸ್ ವೆಲ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೃಷ್ಣಪ್ಪ ಗೌತಮ್, ಕ್ರಿಸ್ ಜೋರ್ಡಾನ್, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications