For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭರ್ಜರಿ ಜಯ

Ipl 2020: Delhi Capitals Won The Match Against Chennai Super Kings

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಪ್ರದರ್ಶನವನ್ನು ನೀಡಿ ಗೆಗೆದ್ದುಕೊಂಡಿದೆ. ಅನುಭವಿಸಗಳ ತಂಡ ಎನಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಎಲ್ಲಾ ವಿಭಾಗಗಳಲ್ಲೂ ಹಿಂದಿಕ್ಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ 44 ರನ್‌ಗಳ ಅಂತರದ ಗೆಲುವನ್ನು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭವನ್ನು ಪಡೆಯಿತು. ಪೃಥ್ವಿ ಶಾ(64 ರನ್ 43 ಎಸೆತ) ಹಾಗೂ ಶಿಖರ್ ಧವನ್(35 ರನ್ 27 ಎಸೆತ) ಮೊದಲ ವಿಕೆಟ್‌ಗೆ 94 ರನ್‌ಗಳ ಜೊತೆಯಾಟವನ್ನು ನೀಡಿದರು. ಬಳಿಕ ಬಂದ ಪಂತ್(37 ರನ್) ಕೂಡ ಹಾಗೂ ಶ್ರೇಯಸ್ ಅಯ್ಯರ್ ಕೂಡ ಉತ್ತಮ ಆಟವನ್ನು ಪ್ರದರ್ಶಿಸಿದರು.

ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 175 ರನ್‌ಗಳಿಸಿತು. ಈ ಮೂಲಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸವಾಲಿನ ಮೊತ್ತದ ಗುರಿಯನ್ನು ನೀಡಿತು. ಚೆನ್ನೈ ಪರವಾಗಿ ಪಿಯೂಷ್ ಚಾವ್ಲ 2 ವಿಕೆಟ್ ಪಡೆದರೆ ಸ್ಯಾಮ್ ಕರ್ರನ್1 ವಿಕೆಟ್ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡ ನಿಧಾಬ ಗತಿಯ ಬ್ಯಾಟಿಂಗ್‌ನ ಮೊರೆಹೋಯಿತು. ಆರಂಭಿಕರಾದ ಮುರಳಿ ವಿಜಯ್ ಹಾಗೂ ಶೇನ್ ವಾಟ್ಸನ್ ಇಂದಿನ ಪಂದ್ಯದಲ್ಲೂ ಮಿಂಚಲು ವಿಫಲರಾದರು. ಫಾಪ್ ಡು ಪ್ಲೆಸಿಸ್ ಮಾತ್ರವೇ ಡೆಲ್ಲಿ ಬೌಲಿಂಗ್‌ಗೆ ಸ್ವಲ್ಪ ಮಟ್ಟಿನ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾದರು. ಧೊನಿ ಈ ಪಂದ್ಯದಲ್ಲಿ 12 ಎಸೆತವನ್ನು ಎದುರಿಸಿ 15 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ತಂಡ ನೀಡಿದ 176 ರನ್‌ಗಳ ಗುರಿಗೆ ಪ್ರತಿಯಾಗಿ ಚೆನ್ನೈ ತಂಡ ಕೇವಲ 131 ರನ್‌ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಡೆಲ್ಲಿ ತಂಡಕ್ಕೆ ಇದು ಎರಡನೇ ಪಂದ್ಯವಾಗಿದ್ದು ಮೊದಲನೇ ಪಂದ್ಯವನ್ನು ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ವಿರುದ್ಧ ಟೈ ಮಾಡಿಕೊಂಡು ಬಳಿಕ ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿತ್ತು. ಈ ಮೂಲಕ ತಾನಾಡಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಗ್ರ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.

Story first published: Saturday, September 26, 2020, 10:04 [IST]
Other articles published on Sep 26, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+