ಐಪಿಎಲ್ 2020: ವೈರಲ್ ಆಗಿದೆ ಐಪಿಎಲ್ ಮೊದಲ 5 ಪಂದ್ಯಗಳ ವೇಳಾಪಟ್ಟಿ!

ಬೆಂಗಳೂರು: ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ ಸೆಪ್ಟೆಂಬರ್ 19ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭಗೊಳ್ಳಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾವು 13ನೇ ಆವೃತ್ತಿಯ ಐಪಿಎಲ್‌ನ ಆರಂಭ ಮತ್ತು ಅಂತ್ಯದ ದಿನಾಂಕವನ್ನಷ್ಟೇ ಅಧಿಕೃತವಾಗಿ ಪ್ರಕಟಿಸಿದೆ. 2020ರ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಿದೆ. ಆದರೆ ಈಗಾಗಲೇ ಐಪಿಎಲ್ ವೇಳಾಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾರ್ಚ್ 29ರಂದು ನಿಜಕ್ಕೂ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಭೀತಿಯ ಕಾರಣ ಐಪಿಎಲ್ ಮುಂದೂಡಲ್ಪಟ್ಟು, ಕೊನೆಗೆ ನಗದು ಶ್ರೀಮಂತ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿತು.
ಸೆಪ್ಟೆಂಬರ್ 19ರಿಂದ ನವೆಂಬರ್ 10ರ ವರೆಗೆ ನಡೆಯಬೇಕಿರುವ ಐಪಿಎಲ್‌ನ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕುತೂಹಲ ಮೂಡಿಸಿದೆ.

ಉದ್ಘಾಟನಾ ಪಂದ್ಯ
ಸೋಶಿಯಲ್ ಮೀಡಿಯಾಗಳಲ್ಲಿರುವ ವೇಳಾಪಟ್ಟಿಯ ಪ್ರಕಾರ, ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಅಂದರೆ ಸೆಪ್ಟೆಂಬರ್ 19ರಂದು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ (ಎಂಐ) ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಕಾದಾಡಲಿವೆ.

2 ಮತ್ತು 3ನೇ ಪಂದ್ಯ
ಸೆಪ್ಟೆಂಬರ್ 20ರಂದು ನಡೆಯುವ ಐಪಿಎಲ್ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ (ಕೆXIಪಿ) ತಂಡಗಳು ಸೆಣಸಾಡಲಿವೆ. ಸೆಪ್ಟೆಂಬರ್ 20ರಂದು ಎರಡು ಪಂದ್ಯಗಳಿರಲಿದ್ದು, ಅದೇ ದಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮೈದಾನಕ್ಕಿಳಿಯಲಿವೆ.

3 ಮತ್ತು 4ನೇ ಪಂದ್ಯಗಳು
ಸೆಪ್ಟೆಂಬರ್ 21ರಂದು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಮುಂಬೈ ಇಂಡಿಯನ್ಸ್ ಆಡಲಿವೆ. ಇನ್ನು 5ನೇ ಪಂದ್ಯವಾಗಿ ಸೆಪ್ಟೆಂಬರ್ 22ರಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮಧ್ಯೆ ಸ್ಪರ್ಧೆ ನಡೆಯಲಿದೆ.

ವೇಳಾಪಟ್ಟಿ ಲೀಕ್ ಆಗಿದ್ಯಾ?
ಐಪಿಎಲ್ 13ನೇ ಆವೃತ್ತಿಯ ಮೊದಲ ಐದು ಪಂದ್ಯಗಳ ವೇಳಾಪಟ್ಟಿ ಲೀಕ್ ಆಗಿದೆ ಎಂಬ ಮಾತುಗಳು ನೆಟ್ ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಬಿಸಿಸಿಐ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಅಧಿಕೃತ ವೇಳಾಪಟ್ಟಿಯನ್ನೂ ಪ್ರಕಟಿಸಿಲ್ಲ. ಹೀಗಾಗಿ ಯಾವುದಕ್ಕೂ ಬಿಸಿಸಿಐ ಅಧಿಕೃತ ವೇಳಾಪಟ್ಟಿ ಪ್ರಕಟಿಸುವವರೆಗೂ ಕಾದು ನೋಡುವುದು ಒಳಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications