Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಪ್ರಿಯರಿಗೆ ಸಕತ್ ಸುದ್ದಿ, ಯಾವುದೇ ಪಂದ್ಯ ಮುಂದೂಡುವುದಿಲ್ಲ

IPL 2020: Ganguly says the tournament is on; No handshakes, selfies

ಕೋಲ್ಕತಾ, ಮಾರ್ಚ್ 9: ಚೀನಾದಿಂದ ಭಾರತಕ್ಕೆ ಬಂದಿರುವ ಕೊರಾನಾವೈರಸ್ ಭೀತಿಯಿಂದ ಹಲವು ಕ್ರೀಡಾಕೂಟಗಳ ವೇಳಾಪಟ್ಟಿಯಲ್ಲಿ ವ್ಯತ್ಯಯ ಉಂಟಾಗಿದೆ. ಈ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿ ಮುಂದೂಡಿಕೆ ಬಗ್ಗೆ ಸುದ್ದಿ ಹಬ್ಬಿತ್ತು. ಇದಕ್ಕೆ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ. ಐಪಿಎಲ್ 2020 ನಿಗದಿಯಂತೆ ನಡೆಯಲಿದೆ ಎಂದಿದ್ದಾರೆ.

ಮಾರ್ಚ್ 29ರಂದು ನಿಗದಿಯಾಗಿರುವ ಐಪಿಎಲ್ ಪಂದ್ಯಾವಳಿ ರದ್ದಾಗಿಲ್ಲ, ಪಂದ್ಯವನ್ನು ಮುಂದೂಡುವುದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟ ಪಡಿಸಿದ್ದಾರೆ.

ಮಾರ್ಚ್ 29ರಿಂದ 13ನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದೆ, ಕೊರೊನಾವೈರಸ್ ಬಗ್ಗೆ ಅಗತ್ಯ ಕ್ರಮಗಳನ್ನು ಬಿಸಿಸಿಐ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಜಾಗೃತಿ ಪ್ರಕಟಣೆಯಂತೆ ಬಿಸಿಸಿಐ ನಡೆದುಕೊಳ್ಳಲಿದೆ ಎಂದಿದ್ದಾರೆ. ಹೀಗಾಗಿ, ಆಟಗಾರರು ಪರಸ್ಪರ ಕೈಕುಲುಕಿಕೊಳ್ಳುವುದು, ತಬ್ಬಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ. ಅಭಿಮಾನಿಗಳ ಜೊತೆ ಸೆಲ್ಫಿ, ಫೋಟೊ, ಹ್ಯಾಂಡ್ ಶೇಕ್ ಕೂಡಾ ನಿರ್ಬಂಧ ಪಟ್ಟಿಯಲ್ಲಿದೆ.

ದೆಹಲಿ, ಉತ್ತರಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೊನಾ ಭೀತಿ ಹೆಚ್ಚಾಗಿದ್ದು, ಅಲ್ಲಿನ ಕ್ರಿಕೆಟ್ ಮಂಡಳಿಯವರು ಆತಂಕ ವ್ಯಕ್ತಪಡಿಸಿದ್ದಾರೆ.

Story first published: Monday, March 9, 2020, 15:01 [IST]
Other articles published on Mar 9, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+