ಐಪಿಎಲ್‌ನಿಂದ ಇಶಾಂತ್ ಶರ್ಮಾ ಔಟ್: ಆಸಿಸ್ ವಿರುದ್ಧದ ಮಹತ್ವದ ಸರಣಿಗೂ ಡೌಟ್

ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಇಶಾಂತ್ ಶರ್ಮಾ ಸ್ನಾಯುಸೆಳೆತಕ್ಕೆ ಒಳಗಾಗಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದೀಗ ಇಶಾಂತ್ ಶರ್ಮಾ ಆಸ್ಟ್ರೇಲಿಯಾ ವಿರುದ್ದ ವರ್ಷಾಂತ್ಯದಲ್ಲಿ ನಡೆಯಲಿರುವ ಮಹತ್ವದ ಸರಣಿಗೆ ಲಭ್ಯರಾಗುವುದು ಅನುಮಾನ ಎನ್ನಲಾಗಿದೆ.
ಇಶಾಂತ್ ಶರ್ಮಾ ಟೂರ್ನಿಯಿಂದ ಹೊರಬೀಳುವ ಮುನ್ನ ಕೇವಲ ಒಂದು ಪಂದ್ಯವನ್ನಷ್ಟೇ ಆಡಿದ್ದರು. ತರಬೇತಿಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಪಕ್ಕೆಲುಬಿನಲ್ಲಿ ನೋವು ಕಾಣಿಸಿಕೊಂಡಿತ್ತು ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
"ಅಕ್ಟೋಬರ್ 7 ರಂದು ದುಬೈನಲ್ಲಿ ನಡೆದ ತಂಡದ ತರಬೇತಿ ಅವಧಿಯಲ್ಲಿ ಬೌಲಿಂಗ್ ಮಾಡುವಾಗ ಇಶಾಂತ್ ಶರ್ಮಾ ಎಡ ಪಕ್ಕೆಲುಬಿನ ತೀವ್ರ ನೋವಿಗೆ ಒಳಗಾದರು. ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಇಶಾಂತ್ ಶರ್ಮಾ ಸ್ನಾಯುಸೆಳೆತಕ್ಕೆ ಒಳಗಾಗಿರುವುದು ಪತ್ತೆಯಾಗಿದೆ. ಈ ಗಾಯದ ಕಾರಣದಿಂದಾಗಿ ಇಶಾಂತ್ ಶರ್ಮಾ ದುರದೃಷ್ಟವಾಶಾತ್ ಐಪಿಎಲ್ 2020ರ ಉಳಿದ ಭಾಗದಿಂದ ಹೊರಗುಳಿಯಲಿದ್ದಾರೆ" ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
2018-19ರಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಗೆದ್ದ ಐತಿಹಾಸಿಕ ಟೆಸ್ಟ್ ಸರಣಿಯಲ್ಲಿ ಇಶಾಂತ್ ಶರ್ಮಾ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದರು. ಮೂರು ಟೆಸ್ಟ್ ಪಂದ್ಯಗಳಲ್ಲಿ ಇಶಾಂತ್ 23.82ರ ಸರಾಸರಿಯಲ್ಲಿ 11 ವಿಕೆಟ್ ಕಿತ್ತಿದ್ದರು. ಹೀಗಾಗಿ ಈ ಬಾರಿಯ ಟೂರ್ನಿಯಲ್ಲೂ ಇಶಾಂತ್ ಶರ್ಮಾ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು.
ಭಾರತ ಕ್ರಿಕೆಟ್ ತಂಡದ ಅನುಭವಿ ವೇಗಿಯಾಗಿರುವ ಇಶಾಂತ್ ಶರ್ಮಾ 2007ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದರು. ಈವರೆಗೆ 97 ಟೆಸ್ಟ್ ಪಂದ್ಯಗಳನ್ನು ಆಡಿರುವ ಶರ್ಮಾ 297 ವಿಕೆಟ್ ಕಬಳಿಸಿದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದ ಅವರು ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳ ಗೊಂಚಲನ್ನು ಪಡೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications