Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಹೈದರಾಬಾದ್‌ಗೆ ಪಾದಾರ್ಪಣೆ ಪಂದ್ಯದಲ್ಲೇ ಗಮನ ಸೆಳೆದ ಹೋಲ್ಡರ್

IPL 2020: Jason Holder impresses with his bowling against Rajasthan Royals

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಪರ ಪಾದಾರ್ಪಣೆ ಪಂದ್ಯ ಆಡಿದ್ದ ವೆಸ್ಟ್ ಇಂಡೀಸ್ ನಾಯಕ, ಆಲ್ ರೌಂಡರ್ ಜೇಸನ್ ಹೋಲ್ಡರ್ ಬೌಲಿಂಗ್‌ನಲ್ಲಿ ಗಮನ ಸೆಳೆದಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹೋಲ್ಡರ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ.

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್ ಪರ ಮೊದಲ ಪಂದ್ಯ ಆಡಿದ್ದ ಜೇಸನ್ ಹೋಲ್ಡರ್ 4 ಓವರ್ ಎಸೆದು 33 ರನ್ ನೀಡಿ 3 ವಿಕೆಟ್ ಉರುಳಿಸಿದ್ದಾರೆ. ಹೋಲ್ಡರ್‌ಗೆ ಸಂಜು ಸ್ಯಾಮ್ಸನ್, ಸ್ಟೀವ್ ಸ್ಮಿತ್ ಮತ್ತು ರಿಯಾನ್ ಪರಾಗ್ ವಿಕೆಟ್ ಲಭಿಸಿತು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಜಸ್ಥಾನ್ ರಾಯಲ್ಸ್ ಬೆನ್ ಸ್ಟೋಕ್ಸ್ 30, ಸಂಜು ಸ್ಯಾಮ್ಸನ್ 36, ಸ್ಟೀವ್ ಸ್ಮಿತ್ 19, ರಿಯಾನ್ ಪರಾಗ್ 20 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ನಷ್ಟದಲ್ಲಿ 154 ರನ್ ಗಳಿಸಿತು. ಸನ್ ರೈಸರ್ಸ್ ಹೈದರಾಬಾದ್ ಮನೀಶ್ ಪಾಂಡೆ 83, ವಿಜಯ್ ಶಂಕರ್ 52 ರನ್‌ನೊಂದಿಗೆ 18.1 ಓವರ್‌ಗೆ 2 ವಿಕೆಟ್ ನಷ್ಟದಲ್ಲಿ 156 ರನ್ ಗಳಿಸಿ ಗೆಲುವನ್ನಾಚರಿಸಿತು.

ಐಪಿಎಲ್‌ನಲ್ಲಿ jಜೇಸನ್ 5 ಇನ್ನಿಂಗ್ಸ್‌ಗಳಲ್ಲಿ 38 ರನ್, 11 ಇನ್ನಿಂಗ್ಸ್‌ಗಳಲ್ಲಿ 5 ವಿಕೆಟ್ ಪಡೆದಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರವೂ ಹೋಲ್ಡರ್ ಆಡಿದ್ದಾರೆ.

Story first published: Friday, October 23, 2020, 10:15 [IST]
Other articles published on Oct 23, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+