ಜಿಯೋ ಧನ್ ಧನಾ ಧನ್: ಉಚಿತವಾಗಿ ಐಪಿಎಲ್‌ ಲೈವ್ ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ.

ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿಯಾಗುವ ಸುದ್ದಿಯನ್ನು ಜಿಯೋ ನೀಡುತ್ತಿದೆ. ಈ ಬಾರಿಯ ಐಪಿಎಲ್ ನೋಡಲು ಹೊಸ ಯೋಜನೆಗಳನ್ನು ಲಾಂಚ್ ಮಾಡಿದೆ. ಜಿಯೋ ಕ್ರಿಕೆಟ್ ಯೋಜನೆಗಳಲ್ಲಿ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಒಂದು ವರ್ಷದ ಚಂದದಾರಿಕೆಯೊಂದಿಗೆ ಡೇಟಾ, ವಾಯ್ಸ್ ಮತ್ತು ಎಸ್‌ಎಂಎಸ್‌ ಲಾಭಗಳನ್ನು ಪಡೆಯಬಹುದಾಗಿದೆ.

ಐಪಿಎಲ್ 2020: ಬೆನ್ ಸ್ಟೋಕ್ಸ್ ಲಭ್ಯತೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಸ್ಥಾನ್ ರಾಯಲ್ಸ್ ಕೋಚ್

ಲೈವ್ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಸಬ್‌ಸ್ಕ್ರಿಪ್ಷನ್‌ನೊಂದಿಗೆ ಲೈವ್ ಐಪಿಎಲ್ ಮ್ಯಾಚ್‌ಗಳನ್ನು ವೀಕ್ಷಿಸಲು ಹೊಸ ಹೊಸ ಟ್ಯಾರಿಫ್ ಯೋಜನೆಗಳನ್ನು ಪ್ರಾರಂಭಿಸುತ್ತಿದೆ. ಇದರಲ್ಲಿ 1 ತಿಂಗಳು, 2 ತಿಂಗಳುಗಳು, 3 ತಿಂಗಳುಗಳು ಮತ್ತು 1 ವರ್ಷದ ಮಾನ್ಯತೆಯನ್ನು ಒಳಗೊಂಡಿರುವ ಪ್ರಿಪೇಯ್ಡ್ ಯೋಜನೆಗಳು ಲಭ್ಯವಿದ್ದು, ಇದರೊಂದಿಗೆ ವಿಶೇಷ ಡೇಟಾ ಲಾಭಗಳು ದೊರೆಯಲಿದೆ.

ಕ್ರಿಕೆಟ್ ಸೀಸನ್‌ಗಾಗಿ ಜಿಯೋ ಅನೇಕ ಯೋಜನೆಗಳನ್ನು ಪ್ರಕಟಿಸಿದೆ. JIO CRICKET PLAN ಡೇಟಾ, ವಾಯ್ಸ್ ಮತ್ತು ಎಸ್‌ಎಂಎಸ್‌ ಲಾಭಗಳೊಂದಿಗೆ 399 ರೂ. ಮೌಲ್ಯದ 1 ವರ್ಷದ ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಚಂದಾದಾರಿಕೆಯನ್ನು ನೀಡಲಿದೆ.

 ರೂ.401 ಪ್ಲಾನ್:

ರೂ.401 ಪ್ಲಾನ್:

ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ 3GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ರೂ.598 ಪ್ಲಾನ್:

ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ 2 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

 ರೂ. 777 ಪ್ಲ್ಯಾನ್

ರೂ. 777 ಪ್ಲ್ಯಾನ್

ರೂ.777ಕ್ಕೆ ರಿಚಾರ್ಜ್ ಮಾಡಿಸಿಕೊಳ್ಳುವ ಗ್ರಾಹಕರಿಗೆ ಜಿಯೋ ಹೆಚ್ಚಿನ ಲಾಭವನ್ನು ಮಾಡಿಕೊಡಲಿದೆ. ಜಿಯೋ ಈ ಪ್ಲಾನ್‌ ರಿಚಾರ್ಜ್ ಮಾಡಿಸುವವರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡುವುದರೊಂದಿಗೆ ಪ್ರತಿ ದಿನ 1.5 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 84 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ರೂ.2599 ಪ್ಲಾನ್

ರೂ.2599 ರಿಚಾರ್ಜ್ ಮಾಡಿಸಿಕೊಂಡವರಿಗೆ ಜಿಯೋ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆಯನ್ನು ಒಂದು ವರ್ಷದ ವರೆಗೆ ನೀಡಲಿದೆ ಮತ್ತು ಒಂದು ವರ್ಷದ ಅವಧಿಗೆ ಪ್ರತಿ ದಿನ 2 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ.

ರೂ. 499 ಡೇಟಾ ಆಡ್ ಆನ್ ಪ್ಲಾನ್

ರೂ. 499 ಡೇಟಾ ಆಡ್ ಆನ್ ಪ್ಲಾನ್

ಈ ಪ್ಲಾನ್‌ ಅನ್ನು ರಿಚಾರ್ಜ್ ಮಾಡಿಸಿಕೊಂಡರೆ ಜಿಯೋ ಬಳಕೆದಾರರಿಗೆ ರೂ.399 ಮೌಲ್ಯದ ಡಿಸ್ನಿ + ಹಾಟ್‌ಸ್ಟಾರ್ VIP ಚಂದದಾರಿಕೆ ಒಂದು ವರ್ಷದ ವರೆಗೆ ಉಚಿತವಾಗಿ ದೊರೆಯಲಿದೆ ಮತ್ತು ಪ್ರತಿ ದಿನ1.5 GB ಡೇಟಾವನ್ನು ಪಡೆದುಕೊಳ್ಳಲಿದ್ದಾರೆ. ಇದು 56 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಐಪಿಎಲ್ 2020 ಮೊದಲ ಪಂದ್ಯ

ಐಪಿಎಲ್ 2020 ಮೊದಲ ಪಂದ್ಯ

ಐಪಿಎಲ್ 2020 ಮೊದಲ ಪಂದ್ಯ ಸೆ. 19(ಶನಿವಾರ) ರಂದು ಅಬುಧಾಬಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದ್ದು ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮೊದಲ ಪಂದ್ಯವನ್ನು ಸೆ.21(ಸೋಮವಾರ)ರಂದು ದುಬೈನಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, September 16, 2020, 10:44 [IST]
Other articles published on Sep 16, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X