Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್‌ನಲ್ಲಿ 3,000 ರನ್ ಚಚ್ಚಿದ ಕಿರಾನ್ ಪೊಲಾರ್ಡ್

IPL 2020: Kieron Pollard Complete 3000 Runs In IPL

ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಕೊನೆಯ ಲೀಗ್ ಪಂದ್ಯ(56ನೇ)ದಲ್ಲಿ ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ಕಿರಾನ್ ಪೊಲಾರ್ಡ್‌ ತಮ್ಮದೇ ಆದ ಮೈಲುಗಲ್ಲು ಸ್ಥಾಪಿಸಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 8 ವಿಕೆಟ್ ನಷ್ಟಕ್ಕೆ 149ರನ್ ಕಲೆಹಾಕಿತು. ಮುಂಬೈ ಇಂಡಿಯನ್ಸ್ ಪರ ಕ್ವಿಂಟನ್ ಡಿಕಾಕ್ 25, ಸೂರ್ಯಕುಮಾರ್ ಯಾದವ್ 36, ಇಶನ್ ಕಿಶನ್ 33 ರನ್‌ಗಳಿಸಿ ಔಟಾದರು.

ಕೆಳಕ್ರಮಾಂಕದಲ್ಲಿ ಅಬ್ಬರಿಸಿ ತಂಡಕ್ಕೆ ನೆರವಾದ ಪೊಲಾರ್ಡ್ 25 ಎಸೆತಗಳಲ್ಲಿ 41 ರನ್ ಸಿಡಿಸಿ ಜೇಸನ್ ಹೋಲ್ಡರ್‌ಗೆ ವಿಕೆಟ್ ಒಪ್ಪಿಸಿದ್ರು. ಪೊಲಾರ್ಡ್‌ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ನಾಲ್ಕು ಭರ್ಜರಿ ಸಿಕ್ಸರ್‌ಗಳಿದ್ದವು.

ಈ ಉತ್ತಮ ಇನ್ನಿಂಗ್ಸ್‌ ಜೊತೆಗೆ ಕಿರಾನ್ ಪೊಲಾರ್ಡ್ ಐಪಿಎಲ್ ಇತಿಹಾಸದಲ್ಲಿ 3,000 ರನ್‌ಗಳಿಸಿದ ಸಾಧನೆ ಮಾಡಿದ್ದಾರೆ. ಒಟ್ಟು 162 ಐಪಿಎಲ್ ಪಂದ್ಯಗಳನ್ನಾಡಿರುವ ಮುಂಬೈ ಬ್ಯಾಟ್ಸ್‌ಮನ್ 3,014 ರನ್ ಕಲೆಹಾಕಿದ್ದಾರೆ. ಇದರಲ್ಲಿ 15 ಅರ್ಧಶತಕ ಒಳಗೊಂಡಿದ್ದು, ಪೊಲಾರ್ಡ್ ಬ್ಯಾಟ್‌ನಿಂದ 198 ಸಿಕ್ಸರ್ ಸಿಡಿದಿವೆ. ಜೊತೆಗೆ ಬೌಲಿಂಗ್‌ನಲ್ಲೂ ತಂಡಕ್ಕೆ ನೆರವಾಗಿದ್ದು ಒಟ್ಟಾರೆ 59 ವಿಕೆಟ್ ಪಡೆದಿದ್ದಾರೆ.

Story first published: Wednesday, November 4, 2020, 9:45 [IST]
Other articles published on Nov 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+