ಐಪಿಎಲ್ 2020: ಕಿಂಗ್ಸ್ XI ಪಂಜಾಬ್ vs ಚೆನ್ನೈ ಸೂಪರ್ ಕಿಂಗ್ಸ್, ಸಂಭಾವ್ಯ ತಂಡ

ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಹಾಗೂ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕಳೆದ ಟೂರ್ನಿಯ ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಅತ್ಯುತ್ತಮ ಆಟಗಾರರನ್ನು ಹೊಂದಿರುವ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಈವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದರೂ ತಲಾ ಒಂದು ಗೆಲುವುಗಳನ್ನು ಮಾತ್ರವೇ ಕಂಡಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಯಿತಾದರೂ ಮುಂದಿನ ಪಂದ್ಯಗಳಲ್ಲಿ ಈ ಪ್ರದರ್ಶನ ಮುಂದುವರಿಯಲು ಸಾಧ್ಯವಾಗಿರಲಿಲ್ಲ. 2014ರ ನಂತರ ಇದೇ ಮೊದಲ ಬಾರಿಗೆ ಸಿಎಸ್‌ಕೆ ತಂಡ ಸತತ ಮೂರು ಸೋಲು ಕಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಸಾಕಷ್ಟು ಪೈಪೋಟಿಯನ್ನು ನೀಡಿತಾದರೂ ಗೆಲುವು ಸಾಧ್ಯವಾಗಿರಲಿಲ್ಲ.
ಮತ್ತೊಂದೆಡೆ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆಲ ಗೆಲ್ಲಬಹುದಾಗಿದ್ದ ಪಂದ್ಯಗಳನ್ನು ಕಳೆದುಕೊಂಡಿದೆ. ಮೊದಲ ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಸೋಲು ಕಂಡರೆ ಎರಡನೇ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ 97 ರನ್‌ಗಳ ಗೆಲುವು ಕಂಡಿತ್ತು. ಆದರೆ ಬಳಿಕ ನಡೆದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 227 ರನ್ ಗಳಿಸಿಯೂ ಆಘಾತಕಾರಿಯಾಗಿ ಸೋಲು ಕಂಡರೆ ಮುಂಬೈ ವಿರುದ್ಧ 48 ರನ್‌ಗಳ ನೀರಸ ಸೋಲು ಅನುಭವಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ ಎಂಬುದು ಕುತೂಹಲ ಮೂಡಿಸಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭಾವ್ಯ ತಂಡ: ಕ್ರಿಸ್ ಗೇಲ್, ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, , ಕ್ರಿಸ್ ಜೋರ್ಡಾನ್, ಕೃಷ್ಣಪ್ಪ ಗೌತಮ್, ಸರ್ಫರಾಜ್ ಖಾನ್, ರವಿ ಬಿಷ್ಣೋಯ್, ಶೆಲ್ಡನ್ ಕಾಟ್ರೆಲ್, ಮೊಹಮ್ಮದ್ ಶಮಿ
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ದೀಪಕ್ ಚಾಹರ್, ಪಿಯೂಷ್ ಚಾವ್ಲಾ, ಶಾರ್ದುಲ್ ಠಾಕೂರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications