ಐಪಿಎಲ್ 2020: ಕೆಕೆಆರ್ vs ಸಿಎಸ್‌ಕೆ, ಟಾಸ್ ವರದಿ ಹಾಗೂ ಪ್ಲೇಯಿಂಗ್ XI

ಅಬುದಾಭಿ ಕ್ರೀಡಾಂಗಣದಲ್ಲಿ 21ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಪ್ರಕ್ರಿಯೆ ಅಂತ್ಯವಾಗಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಯಲ್ಲಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳಲು ಎರಡೂ ತಂಡಗಳಿಗೂ ಅವಕಾಶವಿದೆ.
ಇಂದಿನ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಹಿಂದಿನ ಪಂದ್ಯದ ಆಡುವ ಬಳಗವನ್ನೇ ಉಳಿಸಿಕೊಂಡಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು ಪೊಯೂಷ್ ಚಾವ್ಲಾ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಕರ್ಣ್ ಶರ್ಮಾ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಕೊಲ್ಕತ್ತಾ ಆಡುವ ಬಳಗ: ಶುಬ್ಮನ್ ಗಿಲ್, ಸುನಿಲ್ ನರೈನ್, ನಿತೀಶ್ ರಾಣಾ, ಆಂಡ್ರೆ ರಸ್ಸೆಲ್, ದಿನೇಶ್ ಕಾರ್ತಿಕ್ (ನಾಯಕ & ವಿಕೆಟ್ ಕೀಪರ್), ಇಯಾನ್ ಮಾರ್ಗಾನ್, ಪ್ಯಾಟ್ ಕಮ್ಮಿನ್ಸ್, ರಾಹುಲ್ ತ್ರಿಪಾಠಿ, ಕಮಲೇಶ್ ನಾಗರ್ಕೋಟಿ, ಶಿವಂ ಮಾವಿ, ವರುಣ್ ಚಕ್ರವರ್ತಿ
ಚೆನ್ನೈ ಆಡುವ ಬಳಗ: ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ನಾಯಕ & ವಿಕೆಟ್ ಕೀಪರ್), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಕರಣ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications