
ಐಪಿಎಲ್ 13ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಶೇಖ್ ಜಾಯೆದ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ದುಕೊಂಡಿದೆ.
ದಿನೇಶ್ ಕಾರ್ತಿಕ್ ನಾಯಕತ್ವ ಸ್ಥಾನದಿಂದ ಕೆಳಗಿಳಿದ ಬಳಿಕ ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಕೆಕೆಆರ್ ತಂಡವು ಮುನ್ನೆಡೆಯಲಿದೆ. ಪ್ಲೇಯಿಂಗ್ ಇಲೆವೆನ್‌ನಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಶಿವಂ ಮಾವಿ, ಗ್ರೀನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬ್ಯಾಂಟನ್ ಮತ್ತು ನಾಗರಕೋಟಿ ಬೆಂಚ್ ಕಾದಿದ್ದಾರೆ.
ಇನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕೇವಲ ಒಂದು ಬದಲಾವಣೆ ಮಾಡಿದೆ. ಬೌಲರ್ ಜೇಮ್ಸ್ ಪ್ಯಾಟಿನ್‌ಸನ್ ಬದಲು ನೇಥನ್ ಕೌಲ್ಟರ್ ನೈಲ್ ಸ್ಥಾನ ಪಡೆದಿದ್ದಾರೆ.
ಕೆಕೆಆರ್ ಪ್ಲೇಯಿಂಗ್ 11:
ಶುಭ್‌ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತಿಶ್ ರಾನಾ, ಇಯಾನ್ ಮಾರ್ಗನ್(C), ದಿನೇಶ್ ಕಾರ್ತಿಕ್(wk), ಆ್ಯಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಕ್ರಿಸ್ ಗ್ರೀನ್, ವರುಣ್ ಚಕ್ರವರ್ತಿ, ಪ್ರಸಿದ್ಧ ಕೃಷ್ಣ, ಶಿವಂ ಮಾವಿ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11:
ರೋಹಿತ್ ಶರ್ಮಾ(C), ಕ್ವಿಂಟನ್ ಡಿ ಕಾಕ್(wk), ಸೂರ್ಯಕುಮಾರ್ ಯಾದವ್, ಇಶನ್ ಕಿಶನ್, ಕಿರಾನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ನೇಥನ್ ಕೌಲ್ಟರ್ ನೈಲ್, ರಾಹು್ಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ