ಐಪಿಎಲ್ 2020: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ದಾಖಲಿಸಿದ ಕೊಲ್ಕತಾ ನೈಟ್ ರೈಡರ್ಸ್

ಐಪಿಎಲ್ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ಭರ್ಜರಿ ಗೆಲುವನ್ನು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮತ್ತೊಂದು ಭರ್ಜರಿ ಜಯದೊಂದಿಗೆ ಅಮೂಲ್ಯ ಎರಡು ಅಂಕಗಳನ್ನು ತನ್ನ ಖಾತೆಗೆ ಹಾಕಿಕೊಂಡಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಕೊಲ್ಕತಾ ನೈಟ್ ರೈಡರ್ಸ್ ತಂಡ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಉಳಿದ ಬ್ಯಾಟ್ಸ್ಮನ್‌ಗಳಿಂದ ಹೇಳಿಕೊಳ್ಳುವಂತಾ ಪ್ರದರ್ಶನ ಬಾರದಿದ್ದರೂ ಕೆಕೆಆರ್ 167 ರನ್‌ಗಳ ಗೌರವಯುತ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಯಿತು.
ಕೆಕೆಆರ್ ನೀಡಿದ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಶೇನ್ ವಾಟ್ಸನ್ ಈ ಪಂದ್ಯದಲ್ಲೂ ಉತ್ತಮ ಫಾರ್ಮ್ ಮುಂದುವರಿಸಿದರು. ಅರ್ಧ ಶತಕವನ್ನು ಗಳಿಸಿದ ಶೇಮ್ ವಾಟ್ಸನ್ ಬಳಿಕ ವಿಕೆಟ್ ಒಪ್ಪಿಸಿದರು. ಅನುಭವಿ ಆಟಗಾರ ಅಂಬಾಟಿ ರಾಯುಡು 30 ರನ್‌ಗಳ ಕೊಡುಗೆಯನ್ನು ನೀಡಿದರು. ಅಂತಿಮ ಹಂತದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 8 ಎಸೆತಗಳಲ್ಲಿ 21 ರನ್ ಗಳಿಸಿದರರಾದರೂ ಅದಾಗಲೇ ಪರಿಸ್ಥಿತಿ ಮೀರಿಯಾಗಿತ್ತು. ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ರನ್‌ಗಳ ಗೆಲುವನ್ನು ದಾಖಲಿಸಿಕೊಂಡಿದೆ.
ಬೌಲಿಂಗ್‌ನಲ್ಲಿ ಚೆನ್ನೈ ತಂಡದ ಪರವಾಗಿ ಡ್ವೇಯ್ನ್ ಬ್ರಾವೋ 3 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಸ್ಯಾಮ್ ಕರ್ರನ್, ಶಾರ್ದೂಲ್ ಠಾಕೂರ್ ಹಾಗೂ ಕರ್ಣ್ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು. ಕೆಕೆಆರ್ ಪರವಾಗಿ ಶಿವಮ್ ಮಾವಿ, ವರುಣ್ ಚಕ್ರವರ್ತಿ, ಕಮಲೇಶ್ ನಾಗರ್ಕೋಟಿ, ಸುನಿಲ್ ನರೈನ್ ಹಾಗೂ ರಸೆಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಈ ಗೆಲುವಿನ ಮೂಲಕ ಕೊಲ್ಕತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ನಾಲ್ಕನೇ ಸ್ಥಾನಕ್ಕೆ ತಳ್ಳಿ ಮೂರನೇ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಚೆನ್ನೈ ಇಂದಿನ ಮಟ್ಟೊಗೆ ಆರನೇ ಸ್ಥಾನದಲ್ಲಿ ಮುಂದುವರಿದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications