ಕಿಂಗ್ಸ್ ಇಲೆವೆನ್ ಪಂಜಾಬ್‌ನ ಟ್ರೋಫಿ ಗೆಲ್ಲುವ ಕನಸು ಭಗ್ನ: ಟೂರ್ನಿಯಿಂದ ಹೊರಕ್ಕೆ

ಪ್ರೀತಿ ಜಿಂಟಾ ಒಡೆತನದ ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿಗೆ ಮತ್ತೊಮ್ಮೆ ಐಪಿಎಲ್ ಕಪ್ ಗೆಲ್ಲುವ ಕನಸು ಭಗ್ನಗೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲಲೇಬೇಕಾದ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಟೀಮ್ ಸೋತು ತನ್ನ ಐಪಿಎಲ್ 2020 ಸೀಸನ್‌ಗೆ ಗುಡ್‌ಬೈ ಹೇಳಿದೆ.
ಪ್ಲೇ ಆಫ್ ಹಂತಕ್ಕೇರಲು ಗೆಲ್ಲಲೇಬೇಕಾದ ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಒಂಭತ್ತು ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕಿಂಗ್ಸ್ ಇಲೆವೆನ್ 153ರನ್‌ಗಳಿಸಿ ಸಿಎಸ್‌ಕೆಗೆ 154 ರನ್ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಧೋನಿ ಪಡೆ ಕೇವಲ ಒಂದು ವಿಕೆಟ್ ಕಳೆದುಕೊಂಡು ಒಂಭತ್ತು ವಿಕೆಟ್‌ಗಳ ಜಯದೊಂದಿಗೆ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಮುಗಿಸಿದೆ.
ಸಿಎಸ್‌ಕೆ ವಿರುದ್ಧ ಸೋಲಿನಿಂದಾಗಿ ಸತತ ಐದು ಪಂದ್ಯ ಗೆದ್ದು ಪ್ಲೇ ಆಫ್ ಕನಸನ್ನು ಕಂಡಿದ್ದ ಕೆ.ಎಲ್ ರಾಹುಲ್ ಟೀಮ್ 12 ಪಾಯಿಂಟ್‌ಗಳೊಂದಿಗೆ ಪ್ಲೇ ಆಫ್ ಕನಸನ್ನು ಕಳೆದುಕೊಂಡಿದೆ. ಆಡಿರುವ 14 ಪಂದ್ಯಗಳಲ್ಲಿ ಆರು ಗೆಲುವು, ಎಂಟು ಪಂದ್ಯಗಳ ಸೋಲಿನೊಂದಿಗೆ 12 ಪಾಯಿಂಟ್‌ಗಳೊಂದಿಗೆ ಐಪಿಎಲ್ 13ನೇ ಆವೃತ್ತಿಯನ್ನು ಮುಗಿಸಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications