ಐಪಿಎಲ್ ಇತಿಹಾಸದಲ್ಲಿ 50 ವಿಕೆಟ್ ಪಡೆದವರ ಪಟ್ಟಿಗೆ ಸೇರಿದ ಮೊಹಮದ್ ಶಮಿ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವೇಗಿ ಮೊಹಮದ್ ಶಮಿ ಐಪಿಎಲ್‌ನಲ್ಲಿ ಮೈಲಿಗಲ್ಲೊಂದನ್ನು ದಾಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 50 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಕಿಂಗ್ಸ್ ತಂಡದ ವೆಗಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಶಮಿ ಈ ಮೈಲಿಗಟ್ಟು ದಾಟಿದ್ದಾರೆ.
ಅಬುಧಾಬಿಯ ಶೇಕ್ ಝಾಯೆದ್ ಕ್ರೀಡಾಂಗಣದಲ್ಲಿ ಕೊಲ್ಕತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ರಾಹುಲ್ ತ್ರಿಪಾಠಿ ವಿಕೆಟ್ ಕೀಳುವ ಮೂಲಕ ಮೊಹಮದ್ ಶ ಐವತ್ತು ವಿಕೆಟ್‌ಗಳ ಸಾಧನೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮುನ್ನ ಈ ಸಾಧನೆಗಾಗಿ ಶಮಿ ಒಂದು ವಿಕೆಟ್ ಹಿಂದಿದ್ದರು.
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಒಂದು ವಿಕೆಟ್ ಪಡೆದಿದ್ದ ಮೊಹಮದ್ ಶಮಿ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಕಿತ್ತ ಸಾಧನೆಯನ್ನು ಮಾಡಿದ್ದರು. ಈಗ ಐಪಿಎಲ್ ಟೂರ್ನಿಯಲ್ಲಿ ಅರ್ಧ ಶತಕದ ಸಾಧನೆಯನ್ನು ಮಾಡಿದ್ದಾರೆ.
2009ರ ಐಪಿಎಲ್ ಆವೃತ್ತಿಯಲ್ಲಿ ಮೊಹಮದ್ ಶಮಿ ಮೊದಲ ಪಂದ್ಯವನ್ನು ಆಡಿದ್ದರು. ಆದರೆ ಆರಂಭಿಕ ಆವೃತ್ತಿಗಳಲ್ಲಿ ಮಿಂಚುವಲ್ಲಿ ವಿಫಲರಾಗಿದ್ದ ಶಮಿ ಹೆಚ್ಚಿನ ಅವಕಾಶವನ್ನು ಗಿಟ್ಟಿಸಿಕೊಳ್ಳುವಲ್ಲೂ ವಿಫಲರಾಗಿದ್ದರು. ಆದರೆ ಕಳೆದ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರವಾಗಿ 14 ಪಂದ್ಯಗಳನ್ನು ಆಡಿ 19 ವಿಕೆಟ್ ಪಡೆದಿದ್ದರು ಈ ಮೂಲಕ ಪಂಜಾಬ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದ್ದರು.
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೊನೆಯ ಕ್ಷಣದಲ್ಲಿ ಸೋಲು ಕಂಡಿದೆ. ಹೀಗಾಗಿ ಈ ಬಾರಿಯ ಐಪಿಎಲ್‌ನಲ್ಲಿ ಕೇವಲ ಒಂದು ಗೆಲುವನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications