For Quick Alerts
ALLOW NOTIFICATIONS  
For Daily Alerts
 

ಚೇತರಿಸಿಕೊಂಡ ಗೇಲ್, ಆರ್‌ಸಿಬಿ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ

IPL 2020: KXIP Player Chris Gayle recovers from food poisoning, likely to play against RCB

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಪೋಟಕ ಆಟಗಾರ ಕ್ರಿಸ್ ಗೇಲ್ ಕಣಕ್ಕಿಳಿಯುವ ಕಾಲ ಸನ್ನಿಹಿತವಾದಂತಿದೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತಿದ್ದ ಗೇಲ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಆರ್‌ಸಿಬಿ ವಿರುದ್ಧ ನಡೆಯಲಿರುವ ಮುಂದಿನ ಪಂದ್ಯದಲ್ಲಿ ಮೈದಾನಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಕ್ರಿಸ್ ಗೇಲ್ ನೆಟ್ ಅಭ್ಯಾಸದಲ್ಲಿ ತೊಡಗಿರುವ ಚಿತ್ರವೊಂದನ್ನು ಹಂಚಿಕೊಂಡಿತ್ತು. ತನ್ನ ವೆಬ್‌ಸೈಟ್‌ನಲ್ಲಿ ಕ್ರಿಸ್ ಗೇಲ್ ಆರೋಗ್ಯದ ಬಗ್ಗೆ ವಿವರವಾದ ವರದಿಯೊಂದನ್ನು ಪ್ರಕಟಿಸಿತ್ತು. ಇದರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಅಭಿಮಾನಿಗಳು ಖುಷಿಪಡುವ ಬೆಳವಣಿಗೆ ನಡೆದಿದ್ದು ಸ್ಟಾರ್ ಆಟಗಾರ ಮರಳಿ ಅಂಗಳಕ್ಕೆ ಇಳಿದಿದ್ದಾರೆ ಎಂದು ತಿಳಿಸಿತ್ತು.

ಕ್ರಿಸ್ ಗೇಲ್ ಅವರನ್ನು ಆರಂಭಿಕ ಕೆಲ ಪಂದ್ಯಗಳಲ್ಲಿ ಆಡುವ ಬಳಗದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ಹೊರಗಿರಿಸಿತ್ತು. ಆದರೆ ಕಿಂಗ್ಸ್ ತಂಡದಲ್ಲಿ ಮಧ್ಯಮ ಕ್ರಮಾಂಕ ಕಳಪೆ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ ಗೇಲ್ ಅವರನ್ನು ಆಡುವ ಬಳಗಕ್ಕೆ ಸೇರ್ಪಡೆಗೊಳಿಸಲು ತಂಡ ಬಯಸಿತ್ತು. ಆದರೆ ಆ ಸಂದರ್ಭದಲ್ಲಿ ಗೇಲ್ ಅನಾರೋಗ್ಯಕ್ಕೆ ಈಡಾಗಿದ್ದರು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಕಿಂಗ್ಸ್ ಕೋಚ್ ಅನಿಲ್ ಕುಂಬ್ಳೆ ಮಾತನಾಡುತ್ತಾ ಇಂದಿನ ಪಂದ್ಯದಲ್ಲಿ ಕ್ರಿಸ್ ಗೇಲ್ ಅವರನ್ನು ಕಣಕ್ಕಿಳಿಸಲು ಬಯಸಿದ್ದೆವು. ಆದರೆ ಅವರು ಫುಡ್ ಫಾಯ್ಸನ್‌ಗೆ ಒಳಗಾಗಿರುವ ಕಾರಣ ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಬಳಿಕ ಸ್ವತಃ ಕ್ರೀಸ್ ಗೇಲ್ ಇನ್ಸ್ಟಾಗ್ರಾಮ್‌ನಲ್ಲಿ ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿರುವ ವಿಚಾರವನ್ನು ಪೋಟೋ ಮೂಲಕ ತಿಳಿಸಿದ್ದರು. ಈಗ ಕ್ರಿಸ್ ಗೇಲ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ಮುಂದಿನ ಪಂದ್ಯವನ್ನು ಆರ್‌ಸಿಬಿ ವಿರುದ್ಧ ಆಡಲಿದ್ದು ಗೇಲ್ ಕಣಕ್ಕಿಳಿಯುವುದು ಬಹುತೇಕ ಖಚಿತ.

Story first published: Tuesday, October 13, 2020, 16:55 [IST]
Other articles published on Oct 13, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+