ಐಪಿಎಲ್ 2020: ಪಂಜಾಬ್ vs ಡೆಲ್ಲಿ, ಟಾಸ್ ವರದಿ ಹಾಗೂ ಪ್ಲೇಯಿಂಗ್ 11

ಐಪಿಎಲ್‌ನ ಅಂಗಳದಲ್ಲಿಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಡೆಲ್ಲಿ ಈ ಪಂದ್ಯದ ಮೂಲಕ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಲು ಯತ್ನಿಸಲಿದೆ.
ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಆಟದ ಮೂಲಕ ಮುನ್ನುಗ್ಗುತ್ತಿದ್ದರೆ ಎರಡನೇ ಸುತ್ತಿನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತೀವ್ರ ಪೈಪೋಟಿಯನ್ನು ನೀಡುತ್ತಿದೆ. ಕೊನೆಯ ಎರಡು ಪಂದ್ಯಗಳನ್ನು ಗೆದ್ದಿರುವುದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಉತ್ಸಾಹವನ್ನು ಹೆಚ್ಚಿಸಿದೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಮಡದಲ್ಲಿ ಇಂದಿನ ಪಂದ್ಯಕ್ಕಾಗಿ ಒಂದು ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ. ಕ್ರಿಸ್ ಜೋರ್ಡಾನ್ ಸ್ಥಾನದಲ್ಲಿ ನೀಶಮ್ ಕಣಕ್ಕಿಳಿಯಲಿದ್ದಾರೆ. ಮತ್ತೊಂದೆಡೆ ಡೆಲ್ಲಿ ತಂಡದಲ್ಲಿ ಮೂರು ಬದಲಾವಣೆಯಾಗಿದ್ದು ಗಾಯಗೊಂಡಿದ್ದ ಪಂತ್, ಹೇಟ್ಮೇರ್ ಹಾಗೂ ಡೇನಿಯಲ್ ಸ್ಯಾಮ್ಸ್ ಆಡುವ ಬಳಗದಲಲ್ಇ ಕಾಣಿಸಿಕೊಂಡಿದ್ದಾರೆ
ಕಿಂಗ್ಸ್ ಇಲೆವೆನ್ ಪಂಜಾಬ್ ಆಡುವ ಬಳಗ: ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ದೀಪಕ್ ಹೂಡಾ, ಮುರುಗನ್ ಅಶ್ವಿನ್, ಜೇಮ್ಸ್ ನೀಶಮ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷ್‌ದೀಪ್ ಸಿಂಗ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಾಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮಿಯರ್, ಡೇನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟೊಯಿನಿಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಾಡ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications